ನಾಳೆ ನಗರಕ್ಕೆ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ,ಜೂ.12-ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ (ಜೂ.13) ಬೆಳಿಗ್ಗೆ 8.40ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಟು 9.50ಕ್ಕೆ ಕಲಬುರಗಿ ನಗರಕ್ಕೆ ಆಗಮಿಸುವರು.
ನಂತರ ಸ್ಥಳಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು. ಜೂ.14 ರಂದು ಸ್ಥಳಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಇಲ್ಲಿಯೇ ವಾಸ್ತವ್ಯ ಮಾಡುವರು. ಜೂ.15 ರಂದು ಮಧ್ಯಾಹ್ನ 1.30ಕ್ಕೆ ವಿಮಾನದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.