ನಾಳೆ ನಗರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ

ಬಳ್ಳಾರಿ,ಮೇ. 19: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ನಾಳೆ ಬಳ್ಳಾರಿಗೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಳ್ಳಾರಿಗೆ ಆಗಮಿಸು ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಕೋವಿಡ್-19 ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಭೇಟಿ ನೀಡಲಿದ್ದಾರೆ.
ಬಳ್ಳಾರಿ ಜಿಲ್ಲಾ ಆಡಳಿತ ಕೋವಿಡ್ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 3.30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗ ಳೂರಿಗೆ ತೆರಳಲಿದ್ದಾರೆ.