ನಾಳೆ ನಗರದಲ್ಲಿ ಸಕ್ಕರೆ ಕರಡೀಶ ನಾಟಕ ಪ್ರದರ್ಶನ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ನ,13- ಇಲ್ಲಿನ ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ನಾಳೆ ಸಂಜೆ 6.30 ಕ್ಕೆ ಸತ್ಕಾರ್ಯ ಪುರುಷ ಸಕ್ಕರೆ ಕರಡೀಶ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಉದ್ಘಾಟಿಸಲಿದ್ದು. ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ್ ಅಧ್ಯಕ್ಷತೆವಹಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಪಾಲಿಕೆ ಸದಸ್ಯೆ ಸುರೇಖ ಮಲ್ಲನಗೌಡ, ವೀ.ವಿ.ಸಂಘದ ಅಧ್ಯಕ್ಷ ಹೆಚ್.ಎಂ.ಗುರುಸಿದ್ದಸ್ವಾಮಿ, ಕಾರ್ಯದರ್ಶಿ ಬಿ.ವಿ.ಬಸವರಾಜ್, ಸಂಗಮೇಶ್ವರ ದೇವಸ್ಥಾನದ ಸಮಿತಿಯ ಅಧ್ಯಕ್ಷ ಹಾವಿನಾಳ್ ಬಸವರಾಜ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು ಹಲವಾರು ಗಣ್ಯರಿಗೆ ಈ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ.