ನಾಳೆ ಪ್ರೊ.ಭೀಮಣ್ಣ ಸುಣಗಾರ್ ನಿವೃತ್ತಿ    

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.೩೦; ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಲ್ಲಿ 2009 ರಿಂದ ಇಲ್ಲಿಯವರೆಗೆ ಸುಮಾರು 15 ವರ್ಷಗಳ ಕಾಲ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆಯನ್ನು ಸಲ್ಲಿಸಿ ಅಪಾರ ವಿದ್ಯಾರ್ಥಿ ಬಳಗವನ್ನು ಹೊಂದಿರುವ ಪ್ರೊ.ಭೀಮಣ್ಣ ಸುಣಗಾರ್ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಹಲವಾರು ಸಂಘಸಂಸ್ಥೆಗಳೊಡನೆ ಸಂಪರ್ಕವನ್ನು ಇಟ್ಟುಕೊಂಡು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.  ದಾವಣಗೆರೆ ಜಿಲ್ಲೆಯಾದ್ಯಂತ ಚಿರಪರಿಚಿತರು.  ಯುವಜನ ಸೇವಾ ಇಲಾಖೆ ಮತ್ತು ನವ ಕರ್ನಾಟಕ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಥೆ ಬೆಂಗಳೂರು ಇವರ  ಸಹಯೋಗದ ಕರ್ನಾಟಕ ರಾಜ್ಯ 2015ರ ಶಿಕ್ಷಣ ರತ್ನ ಪ್ರಶಸ್ತಿ, ಕರ್ನಾಟಕ ರಾಜ್ಯ ಯುವ ವಿವೇಕಾನಂದ ಪ್ರಶಸ್ತಿ, ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಪತ್ರಿಕೋದ್ಯಮ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಕಾಲೇಜಿನ ಸಂಪರ್ಕ ಅಧಿಕಾರಿಯಾಗಿ ಮತ್ತು ಮಾಧ್ಯಮ ವಕ್ತಾರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಇದರ ಜೊತೆಗೆ ಕರ್ನಾಟಕ ರಾಜ್ಯ ಅರ್ಥಶಾಸ್ತ್ರ ವೇದಿಕೆ ಸಂಸ್ಥಾಪಕರಲ್ಲೊಬ್ಬರಾಗಿ ವೇದಿಕೆಯ ಸಂಘಟನಾ ಕಾರ್ಯದರ್ಶಿಯಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ, ಅದು ಅಲ್ಲದೆ ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವೇದಿಕೆಯ ಎರಡು  ಅವಧಿಗೆ ಕಾರ್ಯದರ್ಶಿಯಾಗಿ ಮತ್ತು ಪ್ರಸ್ತುತ ಅರ್ಥಶಾಸ್ತ್ರ ವೇದಿಕೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2009ರಿಂದ 2023ರವರೆಗೆ ವಿದ್ಯಾರ್ಥಿಗಳಿಗೆ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ  ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಇಲ್ಲಿಯವರೆಗೆ ಸುಮಾರು 3500 ವಿದ್ಯಾರ್ಥಿಗಳು ಸ್ವಯಂಪ್ರೇರಿತ ರಾಗಿ ರಕ್ತದಾನ ಮಾಡಿ ಹಲವಾರು ಜೀವಗಳನ್ನ ಬದುಕಿಸುವಲ್ಲಿ  ಇವರು ಸಹಾಯಮಾಡಿರುತ್ತಾರೆ, ಈಗಲೂ ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ  ರಕ್ತದ ಅವಶ್ಯಕತೆ ಇದ್ದಲ್ಲಿ ನಮ್ಮ ಕಾಲೇಜಿಗೆ ಬರುತ್ತಾರೆ. ಈ ರೀತಿ ಬಂದವರಿಗೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು  ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು  ಸದಾಸಿಧ್ಧರಿರುತ್ತಾರೆ.ಶ್ರೀಯುತರು ಉತ್ತಮ ಅಧ್ಯಯನ ಅಧ್ಯಾಪನಗಳಿಂದ ಸದಾ ವಿದ್ಯಾರ್ಥಿ ಸ್ನೇಹಿ ಅಧ್ಯಾಪಕ ರಾಗಿ ಹೆಸರು ಮಾಡಿದ ಇವರ ಮುಂದಿನ ಭವಿಷ್ಯ ಸುಖಕರವಾಗಿ,ಸಂತೋಷದಿಂದ ಕೂಡಿರಲೆಂದು ವಿದ್ಯಾರ್ಥಿಗಳು ಪ್ರೀತಿಯಿಂದ ಆಶಿಸಿದ್ದಾರೆ.