
ಬೆಂಗಳೂರು,ಜ.೧೯:ರಾಜ್ಯದ ಈ ಸಾಲಿನ ಬಜೆಟ್ ಮಂಡನೆಯ ದಿನಾಂಕ ನಾಳೆ ನಿಗದಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ನೇತೃತ್ವದಲ್ಲಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಮಂಡನೆಯ ದಿನಾಂಕ ನಿಗದಿ ಮಾಡಲಾಗುತ್ತದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಫೆ. ೧೭ ರಂದು ಬಜೆಟ್ ಮಂಡನೆಯ ಸುಳಿವು ನೀಡಿದ್ದು, ನಾಳೆ ೨೦೨೩-೨೪ನೇ ಸಾಲಿನ ಬಜೆಟ್ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ.
ಬಜೆಟ್ ಮಂಡನೆಗೂ ಮುನ್ನಾ ದಿನ ಫೆ. ೧೬ ರಂದು ಜಂಟಿ ಅಧಿವೇಶನಕ್ಕೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದ್ದು, ಅಂದು ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರು ಉಭಯ ಸದನಗಳನ್ನುದ್ದೇಶಿಸಿ ಭಾಷu ಮಾಡುವರು.
ಜಂಟಿ ಅಧಿವೇಶನದ ಮರುದಿನ ಬಜೆಟ್ ಮಂಡನೆ ದಿನಾಂಕ ನಿಗದಿಯಾಗಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ಹೇಳಿವೆ.