ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಿಜಯಪುರಕ್ಕೆ

ವಿಜಯಪುರ, ಜ 20: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಾಳೆ ( ಜ 21) ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ಏರ್ ಪೆÇೀರ್ಟ್ ಗೆ ಆಗಮಿಸುವ ನಡಾ ್ಡಬೆಳಿಗ್ಗೆ 11-30 ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರ ನಗರದ ಸೈನಿಕ ಶಾಲೆಯ ಹೆಲಿಪ್ಯಾಡ್ ಗೆ ಆಗಮಿಸುವರು.
11-40 ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ.ನಂತರ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ನಗರದ ವಾರ್ಡ್ ನಂಬರ್ 12 ರ ಬಿಎಲ್ಡಿಇ ಇಂಜೀನಿಯರ್ ಕಾಲೇಜ್ ಬಳಿ ಮೈದಾನದಲ್ಲಿ ಮನೆ ಮನೆ ಭೇಟಿ ಹಾಗೂ ಸದಸ್ಯತ್ವ ಅಭಿಮಾನಕ್ಕೆ ಚಾಲನೆ ನೀಡಲಿದ್ದಾರೆ
ಬಳಿಕ ವಾರ್ಡ್ ನಂಬರ್ 10 ರಲ್ಲಿ ಗೋಡೆ ಬರಹ ಹಾಗೂ ಫಲಾನುಭವಿಗಳ ಮನೆಗೆ ಭೇಟಿ ನೀಡಲಿದ್ದಾರೆ.ಸಾಂಕೇತಿಕವಾಗಿ ಐದು ಜನ ಫಲಾನುಭವಿಗಳ ಮನೆಗೆ ಭೇಟಿಯ ನಂತರ 12-45 ಕ್ಕೆ ಹೆಲಿಕಾಪ್ಟರ್ ಮೂಲಕ ಸಿಂದಗಿಗೆ ತೆರಳಿ ಸಿಂದಗಿಯ ವಿಜಯಪುರ ರಸ್ತೆಯಲ್ಲಿ ಅಯೋಜನೆ ಮಾಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾವಹಿಸುವರು.ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಅಶ್ವಥ ನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜುವಿಜಯಪುರ ಸಂಸದ ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಜಿಲ್ಲೆಯ ಎಲ್ಲಾ ಹಾಲಿ ಹಾಗೂ ಮಾಜಿ ಶಾಸಕರು, ಪದಾಧಿಕಾರಿಗಳು ನಿಗಮ ಮಂಡಳಿ ಅಧ್ಯಕ್ಷರು ಸಾಥ್ ನೀಡಲಿದ್ದಾರೆ.ಸಾರ್ವಜನಿಕ ಸಮಾವೇಶದಲ್ಲಿ ನಾಗಠಾಣ ಇಂಡಿ ದೇವರಹಿಪ್ಪರಗಿ ಹಾಗೂ ಸಿಂದಗಿ ನಾಲ್ಕು ವಿಧಾನಸಭಾ ಕ್ಷೇತ್ರದ ಸುಮಾರು 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.