ನಾಳೆ ಬೆಳಿಗ್ಗೆ ಹಿರಿಯ ಕಲಾವಿದ ಶಿವರಾಮ ಅಂತ್ಯಕ್ರಿಯೆ

ಬೆಂಗಳೂರು, ಡಿ.4- ತಲೆಗೆ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಹಿರಿಯ ಕಲಾವಿದ ಇವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ.

ಬೆಳಗ್ಗೆ 7.30 ರಿಂದ 10 ಗಂಟೆ ತನಕ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆ ಬಳಿಕ ಬನಶಂಕರಿಯ ಚಿತ್ರಗಳಲ್ಲಿ ಅಂತಿಮ ಸಂಸ್ಕಾರಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಕುಟುಂಬದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಪುತ್ರ ಲಕ್ಷ್ಮೀಶ್ ತಿಳಿಸಿದ್ದಾರೆ.

ಅಂತಿಮ ದರ್ಶನ:

ತ್ಯಾಗರಾಜ ನಗರದ ನಿವಾಸದಲ್ಲಿ ಅಗಲಿದ ನಟ ಶಿವರಾಂ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮತ್ತು ಸಚಿವ ಆರ್. ಅಶೋಕ ಪಡೆದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಗಲಿದ ಹಿರಿಯ ಕಲಾವಿದ ಶಿವರಾಂ ಅವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ

ನಾಳೆ ಪೋಲಿಸ್ ಗೌರವಗಳೊಂದಿಗೆ ಅಗಲಿದ ಕಲಾವಿದರಾದ ಅವರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿರಿಯ ನಟ ಶಿವರಾಜ್ ಕುಮಾರ್ ಮಾತನಾಡಿ ಶಿವರಾಮಣ್ಣ ಅವರನ್ನು ಕಳೆದುಕೊಂಡು ದುಃಖವಾಗಿದೆ. ಭೌತಿಕವಾಗಿ ಅವರು ಇಲ್ಲದಿದ್ದರೂ ಮನಸ್ಸಿನಲ್ಲಿ ಶಾಶ್ವತವಾಗಿ ಇರಲಿದ್ದಾರೆ ಎಂದರು.

ಹಿರಿಯ ನಟಿ ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಶಿವರಾಮಣ್ಣ ಅವರ ಗುಣಗಾನ ಮಾಡಿದರು