
ಬೆಂಗಳೂರು,ಏ.20-ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ (ಏ. 21) ಪ್ರಕಟವಾಗಲಿದೆ.
ದ್ವಿತೀಯ ಪಿಯುಸಿ ಫಲಿತಾಂಶ ನಾಳೆ
ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಕಳೆದ ಮಾರ್ಚ್ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ.ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಲಿದ್ದಾರೆ.