ನಾಳೆ ಭರತ್ ರೆಡ್ಡಿ ನಾಮಪತ್ರ ಸಲ್ಲಿಕೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ಏ,17-  ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯುವ ಮುಖಂಡ ನಾರಾ ಭರತ್ ರೆಡ್ಡಿ ನಾಳೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸುವುದಾಗಿ ಸಂಜೆವಾಣಿಗೆ ತಿಳಿಸಿದ್ದಾರೆ.
ಬೆಳಿಗ್ಗೆ ಗಾಂಧಿನಗರದ ತಮ್ಮ ನೂತನ  ಕಚೇರಿಯಿಂದ ದುರ್ಗಮ್ಮ ದೇವಸ್ಥಾನಕ್ಕೆ ತೆರಳಿ ನಂತರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಸಾವಿರಾರು ಬೆಂಬಲಿಗರು, ಪಕ್ಷದ ಕಾರ್ಯಕರ್ತರೊಂದಿಗೆ ಭರ್ಜರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ತೆರಳಲಿದ್ದಾರಂತೆ.