ನಾಳೆ ಮಹಾಲಕ್ಷ್ಮಿ ಕಾರ್ತಿಕ ದೀಪೋತ್ಸವ

ಹಿರಿಯೂರು ನ. 18–ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಶನಿವಾರ ಸಂಜೆ ಭಕ್ತಿ ಭಾವದಿಂದ ನಡೆಸಲು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆ ತಿಳಿಸಿದೆ.  ಇದರ ಅಂಗವಾಗಿ ಮಹಾಲಕ್ಷ್ಮಿ ಮಾತಿಗೆ ಬೆಳಿಗ್ಗೆ ಪಂಚಾಮೃತ ಅಭಿಷೇಕ ಪುಷ್ಪಾರ್ಚನೆ ಕುಂಕುಮಾರ್ಚನೆ ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಮಾತೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ತಿಕ ದೀಪೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಪೂಜಾ ಸಮಿತಿಯವರು ಮನವಿ ಮಾಡಿದ್ದಾರೆ.