ನಾಳೆ ರಾಷ್ಟೀಯ ಪತ್ರಿಕಾ ದಿನಾಚರಣೆ – ಗುರುನಾಥ

ರಾಯಚೂರು,ನ.೨೫- ರಾಯಚೂರು ಜಿಲ್ಲಾ ಕಾರ್ಯಕರ್ತರ ಸಂಘ , ರಾಯಚೂರು ರಿಪೋರ್ಟಸ್೯ ಗಿಲ್ಡ್ ರಾಯಚೂರು ವತಿಯಿಂದ ನಾಳೆ ಪತ್ರಿಕಾ ಭವನದಲ್ಲಿ ಬೆಳಿಗ್ಗೆ ೧೦ ಕ್ಕೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಆಚರಣೆಯನ್ನು ಮಾಡಲಾಗುತ್ತಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಅವರು ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಕಾರ್ಯಕ್ರಮ ಉದ್ಘಾಟನೆಯನ್ನು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ವಹಿಸಲಿದ್ದಾರೆ.ಪ್ರಾಸ್ತಾವಿಕ ನುಡಿಯನ್ನು ರಾಯಚೂರು ರಿಪೋರ್ಟರ್ ಗೋಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಅವರು ಮಾತನಾಡಲಿದ್ದಾರೆ.ಹಿರಿಯ ಪತ್ರಕರ್ತ ಬಿ.ವೆಂಕಟಸಿಂಗ್ ಅವರಿಗೆ ಜೀವನಮಾನ ಸಾಧನೆ ಪುರಸ್ಕಾರವನ್ನು ಮಾಡಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ್, ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ, ವಾರ್ತಾ ಇಲಾಖೆಗೆ ಹಿರಿಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ, ಕೆ.ಯು.ಡಬ್ಯು.ಜೆ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ ಆಗಮಿಸಲಿದ್ದಾರೆ ಎಂದರು.
ರಾಯಚೂರು ರಿಪೋರ್ಟರ್ಸ್ ಗೋಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಮಾತನಾಡಿ,
ಪ್ರತಿವರ್ಷದಂತೆ ಈ ವರ್ಷವೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದಲ್ಲಿ ೩೫ ವರ್ಷಗಳಿಂದ ಸೇವೆಯನ್ನು ಸಲ್ಲಿಸಿದ ಬಿ.ವೆಂಕಟಸಿಂಗ್ ಅವರಿಗೆ ಜೀವನಮಾನ ಸಾಧನೆ ಪುರಸ್ಕಾರವನ್ನು ಮಾಡಲಿದೆ ಎಂದರು.ಹೀಗಾಗಿ ಎಲ್ಲಾ ಪತ್ರಕರ್ತರು ತಮ್ಮ ಕುಟುಂಬಸ್ಥರು,ಸ್ನೇಹಿತರೊಂದಿಗೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಎಂ.ಪಾಷಾ ಹಟ್ಟಿ, ರಿಪೋರ್ಟರ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವಿಜಯ ಜಾಗಟಗಲ್ ಇದ್ದರು.