ನಾಳೆ ವಿಪ್ರ ಮಹಾ ಸಮಾವೇಶ


ಹುಬ್ಬಳ್ಳಿ,ಮಾ.18: ವಿಶ್ವ ವಿಪ್ರ ಸೇವಾ ಟ್ರಸ್ಟ್ ವತಿಯಿಂದ ವಿಪ್ರ ಮಹಾ ಸಮಾವೇಶವನ್ನು ಮಾರ್ಚ 19 ರಂದು ಬೆ. 10 ಗಂಟೆಗೆ ನಗರದ ಗೋಕುಲ್ ರಸ್ತೆಯಲ್ಲಿರುವ ಗೋಕುಲ್ ಗಾರ್ಡನ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಪ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಲಕ್ಷ್ಮಣ ಕುಲಕರ್ಣಿ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪ್ರರೆಲ್ಲರೂ ಒಂದಾಗಬೇಕು ವಿಪ್ರರಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಭಿವೃದ್ಧಿಯಾಗಬೇಕು ಇಂತಹ ಅನೇಕ ಕನಸುಗಳನ್ನು ಕಟ್ಟಿಕೊಂಡು ಸಮಸ್ತ ಬ್ರಾಹ್ಮಣ ಸಮಾಜ ವಿಶ್ವ ವಿಪ್ರ ಸೇವಾ ಟ್ರಸ್ಟಿನ ಆಯೋಜನೆಯಲ್ಲಿ ಮತ್ತು ಎಲ್ಲ ವಿಪ್ರ ಸಂಘಟನೆಗಳ, ಮಠ ಮಂದಿರಗಳ ಸಹಯೋಗದಿಂದ ಈ ವಿಪ್ರ ಸಮಾವೇಶ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ನೇತ್ರ ತಜ್ಞರಾದ ಪದ್ಮಶ್ರೀ ಡಾ. ಎಂ.ಎಂ. ಜೋಶಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ, ಹಾಲಪ್ಪ ಆಚಾರ್ , ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕರಾದ ಸಿ.ಎಂ. ನಿಂಬಣ್ಣವರ, ಅರವಿಂದ್ ಬೆಲ್ಲದ್, ಪ್ರಸಾದ್ ಅಬ್ಬಯ್ಯ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ಎಸ್. ವಿ. ಸಂಕನೂರು, ಪ್ರದೀಪ್ ಶೆಟ್ಟರ್ ಸೇರಿದಂತೆ ಮುಂತಾದ ಗಣ್ಯರು ಆಗಮಿಸಲಿದ್ದಾರೆ ಎಂದರು.
ಸಂಜೆ 5.5 ರಿಂದ 6 ಗಂಟೆಯವರೆಗೆ ಸಮಾರೋಪ ಸಮಾರಂಭ ಇರಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ವಿಶ್ವೇಶ್ವರ. ಹೆಗಡೆ ಕಾಗೇರಿ, ವಿ.ಪ. ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ಅಧ್ಯಕ್ಷತೆಯನ್ನು ವಿಶ್ವ ವಿಪ್ರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಲಕ್ಷ್ಮಣ ಚಿದಂಬರ ಕುಲಕರ್ಣಿ ವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದತ್ತಮೂರ್ತಿ ಕುಲಕರ್ಣಿ, ಭಾಗ್ಯಶ್ರೀ ಹುದ್ದಾರ, ಸತೀಶ್ ಹುದ್ದಾರ, ಗಿರೀಶ ಜೋಶಿ, ಎಚ್.ಮುರಳೀಧರನ್ ಉಪಸ್ಥಿತರಿದ್ದರು.