ನಾಳೆ ಶರಣಬಸವ ವಿಶ್ವವಿದ್ಯಾಲಯದ 5 ನೇ ಸಂಸ್ಥಾಪನಾ ದಿನ

ಕಲಬುರಗಿ;ಜು.28: ಶರಣಬಸವ ವಿಶ್ವವಿದ್ಯಾಲಯದ 5ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆಯ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನವು ಜುಲೈ 29 ರಂದು ಬೆಳಗ್ಗೆ 11.00 ಗಂಟೆಗೆ ವಿಶ್ವವಿದ್ಯಾಲಯದ ಮುಖ್ಯ ಆವರಣಲ್ಲಿರುವ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿವಿಯ ಕುಲಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರ ಸಾನಿಧ್ಯದಲ್ಲಿ ಈ ಎರಡೂ ಕಾರ್ಯಕ್ರಮಗಳು ನಡೆಯಲಿವೆ, ಈ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಅವರು ಉಪಸ್ಥಿತರಿರುವರು ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಗುರುವಾರ ಕಲಬುರಗಿಯಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಯ 5ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ಈ ವರ್ಷ ಜುಲೈ 10 ರಂದು ನೇಪಾಳದ ಬೀರಗುಂಜ್‍ನಲ್ಲಿ ಬಸವ ಧರ್ಮ ಪೀಠದ ಅಂತರಾಷ್ಟ್ರೀಯ ಬಸವ ಸಮ್ಮೇಳನದಲ್ಲಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರ ಸೇವೆಯನ್ನು ಗುರುತಿಸಿ, ಪ್ರತಿ ವರ್ಷ ನೀಡಲಾಗುವ “ಅಂತರರಾಷ್ಟ್ರೀಯ ದಾಸೋಹ ರತ್ನ ಪ್ರಶಸ್ತಿ” ಪುರಸ್ಕಾರ ಲಭಿಸಿದ್ದಕ್ಕಾಗಿ, ದಾಸೋಹ ಮಹಾಮನೆಯಲ್ಲಿ ಸಾಯಂಕಾಲ ಪ್ರತ್ಯೇಕ ಸಮಾರಂಭದಲ್ಲಿ ಡಾ. ಅವ್ವಾಜಿಯವರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

5ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿದ್ದು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ್ ಭುವನೇಶ್ ದೇವಿದಾಸ್ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್ (ಕೆಆರ್‍ಇಡಿಎಲ್) ಅಧ್ಯಕ್ಷ ಚಂದ್ರಕಾಂತ ಬಿ ಪಾಟೀಲ ಮುಖ್ಯ ಅಥಿತಿಗಳಾಗಿ ಆಗಮಿಸುವರು. ಏPಖಿಅಐ, ಏಖಇಆಐ ಮತ್ತು ಉನ್ನತ ಶಿಕ್ಷಣ ಕೇಂದ್ರಗಳ ತಜ್ಞರು ಇಂಧನ ದಕ್ಷತೆ ಮತ್ತು ಇಂಧನ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸಗಳನ್ನು ನೀಡಲಿದ್ದಾರೆ. ಹಾಗೂ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ ನಿಷ್ಠಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಡಾ. ಬಿಡವೆ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಕುಲಪತಿಗಳಾದ ಡಾ. ವಿ ಡಿ ಮೈತ್ರಿ ಮತ್ತು ಶ್ರೀ ಎನ್ ಎಸ್ ದೇವರಕಲ್, ಡೀನ್ ಡಾ ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಶ್ರೀ ಬಸವರಾಜ ಮಠಪತಿ ಮತ್ತು ಹಣಕಾಸು ಅಧಿಕಾರಿ ಪೆÇ್ರ.ಕಿರಣ ಮಾಕಾ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಆಯಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು. 2021-22ನೇ ಶೈಕ್ಷಣಿಕ ವರ್ಷದಲ್ಲಿ ಪಿಎಚ್‍ಡಿ ಪೂರ್ಣಗೊಳಿಸಿದ ಅಧ್ಯಾಪಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಮುಖ್ಯ ಕಾರ್ಯಕ್ರಮದ ಅಂಗವಾಗಿ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರ ಜನ್ಮದಿನಾಚರಣೆಯೂ ಅಂದು ನಡೆಯಲಿದೆ ಎಂದು ತಿಳಿಸಿದ್ದಾರೆ.