
ಅಥಣಿ : ಆ.6:ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್. 11ರಂದು ಕೊಕಟನೂರ ಗ್ರಾಮದಲ್ಲಿ ನಿರ್ಮಿಸಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ನೇತೃತ್ವದಲ್ಲಿ ನಾಳೆ, ಸೋಮವಾರ ದಿ, 07-08-2023 ರಂದು ಮುಂಜಾನೆ 10-00 ಗಂಟೆಗೆ ತಾಲೂಕಿನ ಕೊಕಟನೂರ ಗ್ರಾಮದ ಪಶು ವೈದ್ಯಕೀಯ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭದ ವೇದಿಕೆಯ ಆವರಣದಲ್ಲಿ ಕರೆಯಲಾಗಿದೆ.
ಆದ ಕಾರಣ ಈ ಪೂರ್ವಭಾವಿ ಸಭೆಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕೆಪಿಸಿಸಿ ಸದಸ್ಯರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಮಯಕ್ಕೆ ಸರಿಯಾಗಿ ಆಗಮಿಸಲು, ಅಥಣಿ ಬ್ಲಾಕ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ, ತೆಲಸಂಗ ಬ್ಲಾಕ್ ಅಧ್ಯಕ್ಷ ಶ್ರೀಕಾಂತ ಪೂಜಾರಿ ತಿಳಿಸಿದ್ದಾರೆ,