ನಾಳೆ ಶಿವಮೊಗ್ಗಕ್ಕೆ ಬಿಎಸ್ ವೈ – ಸಿದ್ದು ಭೇಟಿ

ಬೆಂಗಳೂರು, ನ. ೭- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ.
ಯಡಿಯೂರಪ್ಪ ಅವರು ನಾಳೆ ಬೆಳಿಗ್ಗೆ ೮.೩೦ಕ್ಕೆ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ತೆರಳಲಿದ್ದು, ಸಿದ್ದರಾಮಯ್ಯ ಅವರು, ೧೦.೩೦ಕ್ಕೆ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶಿವಮೊಗ್ಗದಲ್ಲಿ ನಾಳೆ ೧೧ ಗಂಟೆಗೆ ಶಾಲಾ ಮಕ್ಕಳಿಗೆ ಟ್ಯಾಬ್ ವಿತರಿಸುವ ಜ್ಞಾನದೀವಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ, ಮಧ್ಯಾಹ್ನ ೩ ಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಭೆ ನಡೆಸಿ ನಾಳೆ ಸಂಜೆಯೇ ಬೆಂಗಳೂರಿಗೆ ವಾಪಸ್ಸಾಗುವರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಶಿವಮೊಗ್ಗದಲ್ಲಿ ನಾಳೆ ಮಾಜಿ ಶಾಸಕ ಶ್ರೀನಿವಾಸ್ ಅವರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಂದಲೇ ಹೆಲಿಕಾಪ್ಟರ್ ನಲ್ಲಿ ಬಾದಾಮಿಗೆ ತೆರಳಿ ಭಾನುವಾರ ಮತ್ತು ಸೋಮವಾರ ಬಾದಾಮಿಯಲ್ಲೇ ವಾಸ್ತವ್ಯ ಹೂಡುವರು.