ನಾಳೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬಳ್ಳಾರಿ,ಅ 30: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಾಳೆ ಬೆಳಗ್ಗೆ 9ಕ್ಕೆ ನಗರದ ನಲ್ಲಚೆರವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಭವನದ ಮುಂಭಾಗದಲ್ಲಿರುವ ಶ್ರೀಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಜಯಂತ್ಯೋತ್ಸವನ್ನು ಸರಳವಾಗಿ ಆಚರಿಸಲಾಗುತ್ತದೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಈ ಬಾರಿಯೂ ಸರಳವಾಗಿ ಆಚರಿಸಲಾಗುತ್ತದೆಂದು ಹೇಳಿದ್ದಾರೆ.