
ತಾಳಿಕೋಟೆ:ಮಾ.4: ಇದೇ ದಿ. 5 ರಂದು ತಾಲೂಕಾ ಜಂಗಮ ಸಮಾಜದ ನೇತೃತ್ವದಲ್ಲಿ ಪಟ್ಟಣದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವವು ವಿಜೃಂಬಣೆಯಿಂದ ಜರುಗಲಿದೆ ಎಂದು ಜಂಗಮ ಸಮಾಜದ ಗೌರವಾಧ್ಯಕ್ಷ ಚಬನೂರಿನ ಜ್ಯೋತಿಷ್ಯ ರತ್ನ ಶ್ರೀ ರಾಮಲಿಂಗಯ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಜಯಂತ್ಯೋತ್ಸವ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಶ್ರೀ ರೇಣುಕಾಚಾರ್ಯರ ಮಹಾಮೂರ್ತಿಯ ಭವ್ಯ ಮೆರವಣಿಗೆಯು ಸುಮಂಗಲೆಯ ಕುಂಭ ಮೇಳ, ವೀರಗಾಸೆ, ಕರಡಿ ಮಜಲು ಒಳಗೊಂಡು ಅನೇಕ ಕಲಾತಂಡಗಳೊಂದಿಗೆ ಜರುಗಲಿದ್ದು ಈ ಕಾರ್ಯಕ್ರಮದಲ್ಲಿ ಜಂಗಮ ಸಮಾಜದ 15 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆಂದರು.
ಕಾರ್ಯಕ್ರಮದಲ್ಲಿ ಬೇಡ ಜಂಗಮ ಸಮಾಜದ ರಾಜ್ಯ ಮಹಿಳಾ ಅಧ್ಯಕ್ಷೆ ಶ್ರೀಮತಿ ಸುಜಾತಾ ಹಿರೇಮಠ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ), ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ), ದೇವರಹಿಪ್ಪರಗಿ ಜೆಡಿಎಸ್ ನಾಯಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ), ಕೆಪಿಸಿಸಿ ಸದಸ್ಯ ಬಿ.ಎಸ್.ಪಾಟೀಲ(ಯಾಳಗಿ), ಮಾಜಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ), ಅಸ್ಕಿ ಪೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಕಾಂಗ್ರೇಸ್ ಮುಖಂಡರಾದ ಆನಂದ ದೊಡಮನಿ, ಡಾ.ಪ್ರಭುಗೌಡ ಲಿಂಗದಳ್ಳಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ), ಪ್ರಭುಗೌಡ ದೇಸಾಯಿ, ಮೊದಲಾದವರು ಆಗಮಿಸಲಿದ್ದಾರೆಂದು ಜಂಗಮ ಸಮಾಜದ ಗೌರವಾಧ್ಯಕ್ಷ ಚಬನೂರಿನ ಜ್ಯೋತಿಷ್ಯ ರತ್ನ ಶ್ರೀ ರಾಮಲಿಂಗಯ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.