ನಾಳೆ ಸಿಎಂ ಸಿದ್ದರಾಮಯ್ಯ ಮುದ್ದೇಬಿಹಾಳಕ್ಕೆ

ವಿಜಯಪುರ,ಫೆ.1:ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆ. 2ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಫೆ.2ರಂದು ಬೆಳಗ್ಗೆ 10 ಕ್ಕೆ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಬಳ್ಳಾರಿಯ ಜಿಂದಾಲ್‍ಗೆ ಆಗಮಿಸಲಿದ್ದಾರೆ. 10-50ಕ್ಕೆ ಜಿಂದಾಲ್‍ನಿಂದ ಹೆಲಿಕಾಪ್ಟರ್ ಮೂಲಕ ಮುದ್ದೇಬಿಹಾಳ ಪಟ್ಟಣಕ್ಕೆ 11-45ಕ್ಕೆ ಆಗಮಿಸಲಿದ್ದಾರೆ.

ಮುದ್ದೇಬಿಹಾಳ ಪಟ್ಟಣದಲ್ಲಿ ವಿಬಿಸಿ ಪ್ರೌಢಶಾಲೆಗಳ ಆವರಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿಯೂ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2-30ಕ್ಕೆ ಮುದ್ದೇಬಿಹಾಳ ತಾಲೂಕಿನ ಸರೂರ ಗ್ರಾಮದಲ್ಲಿ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 3 ಗಂಟೆಗೆ ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಅನಂತರ ಮುದ್ದೇಬಿಹಾಳ ಪಟ್ಟಣದಿಂದ ಹೆಲಿಕಾಪ್ಟರ್ ಮೂಲಕ ಜಿಂದಾಲ್‍ಗೆ ಪ್ರಯಾಣ ಬೆಳೆಸಲಿದ್ದಾರೆ. ಜಿಂದಾಲ್‍ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.