ನಾಳೆ ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭದ ಪೂರ್ವ ಸಿದ್ದತಾ ಸಭೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.24: ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ನೂತನ ವಿಜಯನಗ ಜಿಲ್ಲೆಯ ಉದ್ಘಾಟನಾ ಸಮಾರಂಭ ಕುರಿತ ಪೂರ್ವ ಸಿದ್ದತಾ ಸಮಾರಂಭ ಕರೆದಿದೆ.
ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಈ ಸಭೆ ಕರೆಯಲಾಗಿದ್ದು ಅಕ್ಟೋಬರ್ 2 ಮತ್ತು  3 ರಂದು ನಡೆಯಲಿರುವ
ವಿಜಯಗರ ಜಿಲ್ಲಾ ಉದ್ಘಾಟನಾ ಸಮಾರಂಭ ಕುರಿತು ಚರ್ಚಿಸಲು ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊನ್ನನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಹಾಗೂ ಹೊಸಪೇಟೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಸಭೆಗೆ ಆಗಮಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿಬೇಕೆಂದು ಕೋರಲಾಗಿದೆ.