ನಾಳೆ ಹೋಟೆಲ್ ಕಾರ್ಮಿಕರಿಗೆ ಲಸಿಕೆ

ದಾವಣಗೆರೆ, ಜೂ. 7; ದಾವಣಗೆರೆ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಹೋಟೆಲ್ ಉದ್ದಿಮೆದಾರರಿಗೆ, ಹೋಟೆಲ್ ಕಾರ್ಮಿಕರಿಗೆ ಕೋವಿಡ್ 19 ಲಸಿಕೆ ನೀಡುವ ಕಾರ್ಯಕ್ರಮ ಜೂ. 8ರ ಬೆಳಿಗ್ಗೆ 10 ಗಂಟೆಗೆ ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಆನಂದ ರೆಸಿಡೆನ್ಸಿಯಲ್ಲಿ ನಡೆಯಲಿದೆ. ಉದ್ದಿಮೆದಾರರು, ಹೋಟೆಲ್ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಃ9945220838/7019744702ನ್ನು ಸಂಪರ್ಕಿಸಲು ಸಂಘದ ಕಾರ್ಯದರ್ಶಿ ಬಿ.ಕೆ.ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.