ನಾಳೆ 1277 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಚಿಂಚೋಳಿ ಡಿ 26: ತಾಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲಿ ನಾಳೆ ( ಡಿ 27) ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ.
ತಾಲೂಕಿನಲ್ಲಿ ಒಟ್ಟು 425 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಒಟ್ಟು 1277 ಅಭ್ಯರ್ಥಿಗಳ ಕಣದಲ್ಲಿದ್ದಾರೆ. ಇಂದು ಚಂದಾಪುರ ಜೂನಿಯರ್ ಕಾಲೇಜಿನಲ್ಲಿ ನಾಳೆ ನಡೆಯಲಿರುವ ಚುನಾವಣೆ ಅಂಗವಾಗಿ ತಾಲೂಕಿನ ಎಲ್ಲಾ ಮತಗಟ್ಟೆಗಳಿಗೆ ಮತಪೆಟ್ಟಿಗೆಗಳನ್ನು ಚುನಾವಣೆ ಅಧಿಕಾರಿಗಳು ಚುನಾವಣೆಗೆ ನೇಮಿಸಿದ ಸಿಬ್ಬಂದಿಗಳಿಗೆ ಮತದಾನಕ್ಕಾಗಿ ಬಳಸುವ ಸಾಮಾಗ್ರಿಗಳನ್ನು ನೀಡಿ ಕಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಪೆÇಲೀಸ್ ಇಲಾಖೆಯ ಸಿಬ್ಬಂದಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ನಾಳೆಯ ಚುನಾವಣೆ ಕರ್ತವ್ಯಕ್ಕೆ ಹಾಜರಾಗಲು ಜೂನಿಯರ್ ಕಾಲೇಜು ಆವರಣಕ್ಕೆ ಆಗಮಿಸಿದರು