ನಾಳೆ 9ನೇ ಅಂತರಾಷ್ಟ್ರೀಯ ಯೋಗ ದಿನ

ದಾವಣಗೆರೆ; ಜೂ.೨೦ : 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಬೆಳಿಗ್ಗೆ 5 ಗಂಟೆಗೆ ನಗರದ ದೇವರಾಜ ಅರಸ್ ಬಡಾವಣೆ ಬಿ ಬ್ಲಾಕ್ ನಲ್ಲಿರುವ ಈಜುಕೊಳದ ಹತ್ತಿರವಿರುವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.ಅವರು  ತಮ್ಮ ಕಚೇರಿಯಲ್ಲಿ ಯೋಗ ದಿನಾಚರಣೆ ಸಿದ್ದತೆಗಳ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುμï ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,  ಸ್ಕಾರ್ಟ್‍ಸಿಟಿ ಲಿ., ಜಿಲ್ಲಾ ಯೋಗ ಒಕ್ಕೂಟ, ಜಿಲ್ಲಾ ಪೋಲೀಸ್ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ತಪೆÇೀವನ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜ್, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜ್, ಸುಶೃತ ಆಯುರ್ವೇದ ಮೆಡಿಕಲ್ ಕಾಲೇಜ್, ಎನ್.ಸಿ.ಸಿ. ಘಟಕ, ಎನ್.ಎಸ್.ಎಸ್, ಘಟಕ, ಪ್ರಜಾಪಿತ ಬ್ರಹ್ಮಕುಮಾರೀಸ್, ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ, ದಾವಣಗೆರೆ ಇವರುಗಳ  ಸಹಯೋಗದಲ್ಲಿ ಆಯೋಜಿಸಲಾಗಿದೆ.9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವ ಕುಟುಂಬಕ್ಕಾಗಿ ಯೋಗ ಮತ್ತು ಪ್ರತಿ ಅಂಗಳದಲ್ಲಿ ಯೋಗ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಜೂನ್ 21  ರಂದು ದೇವರಾಜ ಅರಸ್ ಬಡಾವಣೆ ಬಿ. ಬ್ಲಾಕ್‍ನ ಈಜುಕೊಳದ ಹತ್ತಿರ ಬೆಳಗ್ಗೆ 5 ಗಂಟೆಯಿಂದ 6 ರ ವರೆಗೆ ಬ್ರಹ್ಮಕುಮಾರೀಸ್ ಇವರಿಂದ ಧ್ಯಾನ, ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 6 ರಿಂದ 6.20 ರವರೆಗೆ ಅಷ್ಠ ನಮಸ್ಕಾರ, ಬೆ.6.20 ರಿಂದ 6.55 ರ ವರೆಗೆ ಉದ್ಘಾಟನೆ ಮತ್ತು ವೇದಿಕೆ ಕಾರ್ಯಕ್ರಮ ಇರುತ್ತದೆ. ನಂತರ 7 ರಿಂದ 7.45 ರ ವರೆಗೆ ಸಾಮಾನ್ಯ ಯೋಗ ಇರುತ್ತದೆ. ಈ ಕಾರ್ಯಕ್ರಮದಲ್ಲಿ 4 ರಿಂದ 5 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದ್ದು ಸಾರ್ವಜನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಬಹುದಾಗಿದೆ. ಯೋಗ ಪ್ರಮುಖರಾಗಗಿ ವೈದ್ಯಶ್ರೀ ಚನ್ನಬಸವ ಭಾಗವಹಿಸುವರು ಎಂದರು.