ನಾವು ಪರಿಸರ ರಕ್ಷಿಸಿದಾಗ ಪರಿಸರ ನಮ್ಮನ್ನು ರಕ್ಷಿಸುತ್ತದೆ:ಅಲಿಝಾರ

ಸೈದಾಪುರ:ಜೂ.6:ನಾವು ಪರಿಸರವನ್ನು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ವಿದ್ಯಾ ವರ್ಧಕ ಸಂಘದ ಕೋಶಾಧ್ಯಕ್ಷ ಮುಕುಂದಕುಮಾರ ಅಲಿಝಾರ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಸಂಘದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು. ಭೂಮಿಯ ಮೇಲೆ ಜೀವವಿರುವ ಪ್ರತಿಯೊಂದು ಜೀವ ರಾಶಿಗೆ ಆಹಾರಕ್ಕಿಂತ ಮೊದಲು ಗಾಳಿ ಅತ್ಯಗತ್ಯವಾಗಿ ಬೇಕು. ಇಂದಿನ ಸ್ಥಿತಿಗತಿಯನ್ನು ನೋಡುತ್ತಿದ್ದರೆ ಗಿಡಗಳ ಮಹತ್ವದ ಅರಿವು ಉಂಟಾಗುತ್ತದೆ. ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಈ ದಿನದ ಮಹತ್ವವನ್ನು ಪ್ರತಿಯೊಬ್ಬ ವ್ಯೆಕ್ತಿಯೂ ತಿಳಿಯಬೇಕು. ಪ್ರತಿಯೊಬ್ಬರು ಪರಿಸರವನ್ನು ಉಳಿಸಿ ಬೆಳೆಸುವಂತ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ಶಿಕ್ಷಕರಾದ ಗೂಳಪ್ಪ.ಎಸ್.ಮಲ್ಹಾರ, ರಾಚಯ್ಯ ಸ್ವಾಮಿ ಬಾಡಿಯಾಲ, ಕಾಶಿನಾಥ ಶೇಖಸಿಂದಿ, ವಿಶ್ವನಾಥರೆಡ್ಡಿ ಪಾಟೀಲ ಕಣೇಕಲ್, ಉಪನ್ಯಾಸಕ ದೇವಿಂದ್ರ ಪೀರಾ, ಸತೀಶ ಪುರ್ಮಾಂ, ಶಿವಕುಮಾರ ಬಂಡಿ, ಭೀಮಣ್ಣ ನಾಯಕ ಸೇರಿದಂತೆ ಇತರರಿದ್ದರು.