ನಾಸೀರ್ ಹುಸೇನ್ ಗೆ ಪ್ರಮಾಣ ವಚನ ನೀಡಲು ಅವಕಾಶ ಬೇಡ: ಯತ್ನಾಳ

ಸಂಜೆವಾಣಿ ವಾರ್ತೆ,
ವಿಜಯಪುರ,ಮಾ.9: ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆ ಪ್ರಮಾಣ ವಚನ ಬೋಧಿಸಲು ಅವಕಾಧ ನೀಡಬಾರದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪಾಕಿಸ್ತಾನ್ ಪರ ಘೋಷಣೆ ವಿಚಾರ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ನಾಸೀರ್ ಹುಸೇನ್ ಹೆ ಸುತ್ತಿಕೊಳ್ಳುತ್ತದೆ ಎಂದರು.
ಘೋಷಣೆ ಕೂಗಿದ ವ್ಯಕ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೆ ನಿಕಟ ಸಂಬಂಧ ಹೊಂದಿದ್ದಾರೆ. ಇದರಲ್ಲಿ ನಾಸೀರ್ ಹುಸೇನ್ ಪಾತ್ರ ಇದ್ದೆ ಇದೆ ಎಂದರು.
ಬಾಂಬ್ ಬ್ಲಾಸ್ಟ್ ಪ್ರಕರಣ ತನಿಖೆ ಮುಗಿಯುವ ವರೆಗೂ ನಾಸೀರ್ ಹುಸೇನ್‍ಗೆ ಪ್ರಮಾಣ ವಚನ ಕೊಡಬಾರದು. ಪ್ರಮಾಣ ವಚನ ಬೋಧಿಸದಂತೆ ಉಪರಾಷ್ಟ್ರಪತಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.