ನಾಸೀರ್ ಹುಸೇನ್ ವಜಾಕ್ಕೆ ಬಿಜೆಪಿ ಆಗ್ರಹ

ಸಂಜೆವಾಣಿ ವಾರ್ತೆ
ದಾವಣಗೆರೆ.ಫೆ.೨೮: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶ ವಿರೋಧಿ ಕೃತ್ಯ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಎಸ್.ನಿಜಲಿಂಗಪ್ಪ ಬಡಾವಣೆಯ ಜವಾನ್ ಸ್ಮಾರಕ ಉದ್ಯಾನವನದ ಮುಂದೆ ಪ್ರತಿಭಟನೆ ನಡೆಸಿದರು. ನಂತರ ಅಲ್ಲಿಂದ ಕಾಂಗ್ರೆಸ್ ಕಚೇರಿಗೆ ತೆರಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ, ರೈತ ಮುಖಂಡ ಕೊಳೇನಹಳ್ಳಿ ಬಿ.ಎಂ.ಸತೀಶ್, ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶ ವಿರೋಧಿ ಕೃತ್ಯ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕು. ಇನ್ನೂ ಇದನ್ನು ಪ್ರಶ್ನಿಸಿದ ಮಾಧ್ಯಮದವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ನಾಸೀರ್ ಹುಸೇನ್ ಮಾಧ್ಯಮದವರನ್ನು ಗದರಿಸಿ, ನಡೀಯೋ ಯಾವನೋ ನೀನು ನೌನ್ನು ಎಂದು ಅಸಭ್ಯವಾಗಿ ವರ್ತಿಸುವುದು ಸಂಸದೀಯ ವರ್ತನೆಯಲ್ಲ. ಅವರದು ಅನಾಗರಿಕ ಪ್ರವೃತ್ತಿ ಎಂದು ಕಿಡಿಕಾರಿದರು.ಯುವಮೋರ್ಚಾದ ರಾಜನಹಳ್ಳಿ ಶಿವಕುಮಾರ್, ಕಾಂಗ್ರೆಸ್ ಪಕ್ಷ ದೇಶಕ್ಕೆ ಮಾರಕ ಕಾಯಿಲೆ ಇದ್ದಂತೆ. ಅದರಲ್ಲೂ ದೇಶ ದ್ರೋಹದ ಕೆಲಸ. ಇಂತಹ ಖದೀಮರು ಕರ್ನಾಟಕದಿಂದ ಆಯ್ಕೆ ಆಗಿರುವುದು ಇಡೀ ಕನ್ನಡ ನಾಡಿನ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ತಕ್ಷಣ ಕಾಂಗ್ರೆಸ್ ಪಕ್ಷ ಇಂತಹ ದೇಶದ್ರೋಹಿ ಚಟುವಟಿಕೆಗಳ ಬಗ್ಗೆ ತನ್ನ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಯುವ ಮೋರ್ಚಾದ ಅಧ್ಯಕ್ಷ ಆರ್.ಎಲ್. ಶಿವಪ್ರಕಾಶ್, ನಾಸೀರ್ ಅಹಮದ್ ಹಾಗೂ ಟಿಪ್ಪುಸುಲ್ತಾನ ಮಾತನಾಡಿ ಪಾಕಿಸ್ತಾನ ಜಿಂದಾಬಾದ್ ಎಂದವನ್ನು ಪಾಕಿಸ್ತಾನಕ್ಕೆ ಕಳಿಸಬೇಕು. ಇಂತಹ ಕೃತ್ಯ ನಡೆದಿರುವುದು ಅಸಹನೀಯ. ಇದು ಸಹಿಸಲು ಸಾಧ್ಯವಿಲ್ಲ. ಇಂತಹ ಕಿಡವಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಅಗತ್ಯ ಎಂದು ಹೇಳಿದ್ದಾರೆ. ಮುನಿಯಪ್ಪನವರು ಸೂಕ್ತವಾದ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಆದ್ದರಿಂದ ನಾಸೀರ್ ಹುಸೇನ್ ರವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.