ನಿಂತ ಲಾರಿಗೆ ಬೈಕ್ ಡಿಕ್ಕಿ: ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

ಚಿಂಚೋಳಿ,ಅ.19-ರಸ್ತೆ ಬದಿಗೆ ನಿಂತ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಮೇಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಛತ್ರಸಾಲ ಬಳಿ ಬುಧವಾರ ಸಂಜೆ ನಡೆದಿದೆ.
ಮೃತನನ್ನು ಆಂಧ್ರಪ್ರದೇಶದ ಕರ್ನೂಲ್‍ದ ಲಕ್ಷ್ಮಣ ತಂದೆ ನಾರಾಯಣ (62) ಎಂದು ಗುರುತಿಸಲಾಗಿದ್ದು, ನಾಗಯ್ಯ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕೂಲಿ ಕೆಲಸಗಾರರಾದ ಇವರು ಕೂಲಿ ಕೆಲಸ ಮುಗಿಸಿಕೊಂಡು ಬೈಕ್ ಮೇಲೆ ಕರ್ನೂಲ್‍ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.