ನಿಖಿಲ್ ಕುಮಾರ್ ರಾಜೀನಾಮೆ

ಬೆಂಗಳೂರು,ಮೇ೨೫:ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಆದ ಹಿನ್ನಡೆ ಹಾಗೂ ತಮ್ಮ ಸೋಲಿನ ಹಿನ್ನೆಲೆಯಲ್ಲಿ ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್‌ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ಈ ಸಂಬಂಧ ನಿಖಿಲ್‌ಕುಮಾರಸ್ವಾಮಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂರವರಿಗೆ ರಾಜೀನಾಮೆ ಪತ್ರ ಕಳುಹಿಸಿ ಹೊಸ ನಾಯಕತ್ವಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುತ್ತೇನೆ. ಸೋಲೇ ಅಂತಿಮವಲ್ಲ ಪಕ್ಷದ ಜತೆ ಸದಾ ನಿಲ್ಲುವೆ ಎಂದು ಹೇಳಿದ್ದಾರೆ.
ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಅವರು ಹೇಳಿದ್ದಾರೆ.