ನಿಗಮಕ್ಕೆ 2 ಸಾವಿರ ಕೋಟಿ ಅನುದಾನ ನೀಡಲಿ

ಗಂಗಾವತಿ ನ.18: ನಗರದ ಸಿಬಿಎಸ್ ಸರ್ಕಲ್‍ನಲ್ಲಿ ಮಂಗಳವಾರ ಸಂಜೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು.
ಬಳಿಕ ಮಾತನಾಡಿದ ವೀರಶೈವ ಲಿಂಗಾಯತ ಅಭಿವೃದ್ಧಿಯ ನಿಗಮಕ್ಕೆ 2ಸಾವಿರ ಕೋಟಿ ರೂ. ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಈ ಸಂದರ್ಭದಲ್ಲಿ ಹೆಬ್ಬಾಳ ಶ್ರೀಗಳು, ತಿಪ್ಪೇರುದ್ರಸ್ವಾಮಿ, ಮಾಜಿ ಜಿಪಂ ಸದಸ್ಯ ಸಿದ್ದರಾಮಸ್ವಾಮಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ಶರಣಯ್ಯಸ್ವಾಮಿ ಉಡುಮಕಲ್, ಕಳಕನಗೌಡ ಕಲ್ಲೂರು, ರಾಚಪ್ಪ ಸಿದ್ದಾಪುರ, ಆರ್. ದೇವಾನಂದ್, ಹೇಮಂತ್ ರಾಜ, ಮಹೇಶ ಹೊಸಮನಿ, ಮಹೇಶ ಜವಳಿ, ಸಂಗಯ್ಯಸ್ವಾಮಿ ಸಂಶಿಮಠ ಇತರರಿದ್ದರು.