ನಿಗಮದ ಹಣ ದುರ್ಬಳಕೆಶೀಘ್ರ ಸತ್ಯಾಂಶ ಹೊರಕ್ಕೆ

(ಸಂಜೆವಾಣಿ ಪ್ರತಿನಿಧಿಯಿಂದ)
ರಾಯಚೂರು(ಬೆಂಗಳೂರು),ಜೂ.೮:ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ೩-೪ ದಿನಗಳಲ್ಲಿ ಸತ್ಯಾಂಶ ಹೊರ ಬೀಳಲಿದೆ ಎಂದು ರಾಯಚೂರು ಗ್ರಾಮೀಣ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಾನು ಯಾವುದೇ ಸಭೆಗಳನ್ನು ಅಧಿಕಾರಿಗಳೊಂದಿಗೆ ನಡೆಸುವಂತಿರಲಿಲ್ಲ. ಈ ಸಂದರ್ಭದಲ್ಲಿ ಹಣ ವರ್ಗಾವಣೆಯಾಗಿರಬಹುದು. ನಿಗಮದ ಹಣ ವರ್ಗಾವಣೆಯಾಗಿರುವ ಕುರಿತು ನನಗೆ ಮಾಹಿತಿ ಲಭ್ಯವಾಗಿದೆ. ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ನಂತರ ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಈ ಅಕ್ರಮ ಈ ಮೊದಲು ನನ್ನ ಗಮನಕ್ಕೆ ಬಂದಿರಲಿಲ್ಲ. ಕಳೆದ ಫೆಭ್ರವರಿಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಸಮಾಜದ ಅಭಿವೃದ್ಧಿಗೆ ಮೀಸಲಿಡುವ ಹಣವನ್ನು ದುರ್ಬಳಕೆಯನ್ನು ನಾನು ಮಾಡಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.