ನಿಗಮ ಸ್ಥಾಪನೆ ಸ್ವಾಗತಾರ್ಹ: ಶಿವಾಚಾರ್ಯ ಶ್ರೀ

ಬೆಳಗಾವಿ,ನ18 : ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು. ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವೀರಶೈವ ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆಯಾಗಬೇಕೆಂದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ತುಂಬಾ ಸಂತಸ ತಂದಿದೆ ಎಂದು ಹುಕ್ಕೇರಿ ಹಿರೇಮಠದ ಶ್ರೀಗಳು ಸ್ವಾಗತಿಸಿದ್ದಾರೆ.
ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಈ ನಿಗಮ ಹೆಚ್ಚಿನ ಆಧ್ಯತೆ ನೀಡಿ ಅವರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಲಿ ಎಂದು ಶ್ರೀಗಳು ಶುಭಹಾರೈಸಿದರು