ನಿಗೂಢ ಸ್ಫೋಟ ಮೂವರಿಗೆ ಗಂಭೀರ ಗಾಯ

ಬೆಂಗಳೂರು,ಜು.೧೦- ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ನಿಗೂಢ ವಸ್ತು ಸ್ಪೋಟಗೊಂಡು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನರ ವೈಟ್ ಫೀಲ್ಡ್ ನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಜು. ೬ ರ ರಾತ್ರಿ ೧೧.೩೦ ಕ್ಕೆ ಕಟ್ಟಡ ಕಾಮಗಾರಿ ವೇಳೆ ನಿಗೂಢವಸ್ತುವೊಂದು ಸ್ಪೋಟಗೊಂಡಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರಲ್ಲಿ ಇಬ್ಬರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಶ್ರೀನಿವಾಸ್, ಮಣಿಕಂಠನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ವೈಟ್ ಫೀಲ್ಡ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.