ನಿಜಲಿಂಗಪ್ಪ ಪ್ರಾಮಾಣಿಕ ರಾಜಕಾರಣಿ

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ಪುಣ್ಯ ಸ್ಮರಣೆ ಪ್ರಯುಕ್ತ ವಿಧಾನಸೌಧದ ಮುಂಭಾಗದಲ್ಲಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಚಿವೆ ಲೀಲಾವತಿ ಆರ್. ಪ್ರಸಾದ್, ಮತ್ತಿತರರು ಇದ್ದಾರೆ.

ಬೆಂಗಳೂರು,ಆ.೮-ದಿವಂಗತ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರು ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಅವರ ಬದುಕು ನಮ್ಮೆಲ್ಲರಿಗೂ ಮಾರ್ಗದರ್ಶನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾiಯ್ಯ ಹೇಳಿದರು. ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಿಜಲಿಂಗಪ್ಪರವರ ಪುಣ್ಯಸ್ಮರಣೆ ಹೀಗಾಗಿ ಅವರು ನಾಡಿಗೆ, ದೇಶಕ್ಕೆ ನೀಡಿದ ಸೇವೆಯನ್ನು ಸ್ಮರಿಸಲಾಗುತ್ತಿದೆ ಎಂದು ಹೇಳಿದರು.
ನಿಜಲಿಂಗಪ್ಪನವರು ಮುತ್ಸದ್ಧಿ ರಾಜಕಾರಣಿಯಾಗಿದ್ದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೀರಾವರಿ ಯೋಜನೆಗೆ ಹೆಚ್ಚು ಆದ್ಯತೆ ನೀಡಿದ್ದರು. ನಿಜಲಿಂಗಪ್ಪ ಅವರ ಆಡಳಿತದಲ್ಲಿ ಕರ್ನಾಟಕ ಏಕೀಕರಣಗೊಂಡ ನಂತರ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಬದುಕು ಮತ್ತು ಮಾರ್ಗದರ್ಶನ ನಮಗೆ ಸ್ಫೂರ್ತಿಯಾಗಿದೆ ಎಂದರು.