ನಿಜಶರಣ ಅಂಬಿಗರ ಚೌಡಯ್ಯನವರ 903ನೇ ಜಯಂತ್ಯೋತ್ಸವ ಆಚರಣೆ

ಯಾದಗಿರಿ:ಜ.22:ನಗರದ ಜಿಲ್ಲಾ ಕರವೇ ಕಾರ್ಯಾಲಯದಲ್ಲಿ ತಮ್ಮ ವಚನಗಳ ಮೂಲಕ ಶ್ರೇಷ್ಠ ವಚನಕಾರರಾದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವರ 903 ನೇ ಜಯಂತ್ಯೋತ್ಸವದ ನಿಮಿತ್ಯ ನಿಜಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಣೆ ಮಾಡಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷರಾದ ಶ್ರೀ ಟಿ.ಎನ್.ಭೀಮುನಾಯಕ ರವರು 12 ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತಿಯಿಂದ ಅಂಬಿಗ ಪ್ರವೃತ್ತಿಯಲ್ಲಿ ಅನುಭಾವಿ ನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವ. ತನ್ನ ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಈತನ ವಚನಗಳ ಅಂಕಿತವಾಗಿದೆ.

ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟು ಹಾಕುವ ಅಂಬಿಗ ಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳುವ ಎಂದು ಹೇಳಿಕೊಳ್ಳುವುದರಲ್ಲಿ ತನ್ನ ಅನುಭವದೃಷ್ಟಿಯನ್ನು ಪ್ರಕಟಿಸಿದ್ದಾನೆ.

ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ದೀಪಕ್ ಒಡೆಯರ, ವಿಶ್ವರಾಜ್ ಹೊನಗೇರಾ, ವಿಜಯಕುಮಾರ ರಾಠೋಡ, ಸುರೇಶ ಬೆಳಗುಂದಿ, ಮೌನೇಶ ಮಾದ್ವಾರ, ದಾವೀದ್ ಬೆಳಗುಂದಿ, ಮಲ್ಲಿಕಾರ್ಜುನ, ರಮೇಶ.ಡಿ.ನಾಯಕ ಇತರೆ ಕಾರ್ಯಕರ್ತರು ಭಾಗಿಯಾಗಿದ್ದರು