ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ನಾಳೆ

ಕಲಬುರಗಿ,ಜ.21-ಗುಲಬರ್ಗಾ ವಿಶ್ವವಿದ್ಯಾಲಯದ ನಿಜ ಶರಣ ಅಂಬಿಗರ ಚೌಡಯ್ಯನವರ ಅಧ್ಯಯನ ಪೀಠದ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಸಮಾರಂಭವನ್ನು ಜ.21 ರಂದು ಬೆಳಿಗ್ಗೆ 10.30ಕ್ಕೆ ವಿಶ್ವವಿದ್ಯಾಲಯದ ನಿಜ ಶರಣ ಅಂಬಿಗರ ಚೌಡಯ್ಯನವರ ಅಧ್ಯಯನ ಪೀಠದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಿಂಧನೂರ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕ ಹಾಗೂ ವಿಶೇಷ ಅಧಿಕಾರಿ ಪ್ರೊ.ಎಂ.ನಾಗರಾಜ ಅವರು ವಿಶೇಷ ಉಪನ್ಯಾಸ ನೀಡುವರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಂಪತಕುಮಾರ ಲೋಯಾ, ವಿದ್ಯಾವಿಷಯಕ ಪರಿಷತ್ ಸದಸ್ಯ ಪ್ರೊ.ವ್ಹಿ.ಟಿ.ಕಾಂಬಳೆ ಅತಿಥಿಗಳಾಗಿ ಆಗಮಿಸುವರು. ನಿಜ ಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಆಶಯ ನುಡಿಗಳನ್ನಾಡುವರು.