ನಿಟ್ಟೆ ಮೀನಾಕ್ಷಿ ಕಾಲೇಜು ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು,ಜೂ10- ನಗರದ ಪ್ರತಿಷ್ಟಿತ ನಿಟ್ಟೆ ಮೀನಾಕ್ಷಿ ಕಾಲೇಜು ಹಾಸ್ಟೆಲ್‌ನಲ್ಲಿ ದಾವಣೆಗೆರೆ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ.  ದಾವಣಗೆರೆ ಜಿಲ್ಲೆ ಮೂಲದ ವಿವೇಕ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾರೆ.ಕಳೆದ ಎರಡು ವರ್ಷಗಳಿಂದ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿವೇಕ್, ನಾಲ್ಕನೇ ಸೆಮಿಸ್ಟರ್ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದರು.ಇಂದು ಕಾಲೇಜು ಹಾಸ್ಟೆಲ್‌ನ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು,ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನೆಂದು ಈವರೆಗೆ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಕಾಲೇಜು ಹಾಸ್ಟೆಲ್‌ನ ಸಿಬ್ಬಂದಿ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಭೇಟಿ ಮಾಡಿದ್ದಾರೆ. ಯಲಹಂಕ ಉಪನಗರ ಪೊಲೀಸರು ಘಟನಾ ಸ್ಥಳಕ್ಕೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಕೆಳಗಿಳಿಸಿ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆಗೆ ವ್ಯವಸ್ಥೆ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದಾದರೂ ಸಾಕ್ಷಿಗಳು ಸಿಗಬಹುದೇ ಎಂಬ ಪರಿಶೀಲನೆ ಕಾರ್ಯ ಮುಂದುವರೆದಿದ್ದು, ಘಟನಾ ಸ್ಥಳದ ಕೋಣೆಯೊಳಗೆ ಇತರೆ ಹಾಸ್ಟೆಲ್‌ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ.