ನಿಡುಗುರ್ತಿ ಯಲ್ಲಿ ಯೋಗ ದಿನಚರಣೆ

ಸಂಜೆವಾಣಿ ವಾರ್ತೆ
ಸಂಡೂರು ಜು 23 : ತಾಲ್ಲೂಕಿನ ಬಂಡ್ರಿ ಸಮೀಪದ ನಿಡುಗುರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ 8ನೇ ವರ್ಷ ವಿಶ್ವಯೋಗ ದಿನಾಚರಣೆಯನ್ನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರು ಮಾತನಾಡಿ ಪ್ರತಿವರ್ಷದ ಸಂಪ್ರದಾಯದಂತೆ ವಿಶ್ವಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಎಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸಬ / ಎಕಾದ ಪ್ರಾಚಿನ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಊರಿನ ಗ್ರಾಮಸ್ಥರು ಶಿಕ್ಷಕರು ವಿದ್ಯಾರ್ಥಿಗಳು ಊರ ಮುಖಂಡರು ಉಪಸ್ಥಿತರಿದ್ದರು.