ನಿತ್ಯ ಕನ್ನಡ ಬಳಸಿ, ಜನಸ್ನೆಹಿ ಆಡಳಿತ ನೀಡಿ: ಟಿ.ಎಸ್.ನಾಗಾಭರಣ

ಧಾರವಾಡ, ಜು 31: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ, ಸುತ್ತೋಲೆಗಳನ್ನು ಕನ್ನಡಿಕರಿಸಿ, ಆಡಳಿತ ನಿರ್ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕನ್ನಡ ಭಾμÁ ಅನುಷ್ಠಾನ ಕುರಿತು ಪ್ರಗತಿ ಪರುಶೀಲನಾ ಸಭೆಯಲ್ಲಿ ಮಾತನಾಡಿದರು.

ಎಲ್ಲ ಇಲಾಖೆಗಳು ಕನ್ನಡ ಬಳಕೆ ಮಾಡಬೇಕು. ಸರಕಾರ ಮತ್ತು ಸಾರ್ವಜನಿಕರೊಂದಿಗೆ ಕನ್ನಡದಲ್ಲಿಯೇ ಪತ್ರ ವ್ಯವಹಾರ ಮಾಡಬೇಕು. ಕೇಂದ್ರೀಯ ವಿದ್ಯಾಲಯ, ಸಿಬಿಎಸ್‍ಸಿ ಶಾಲೆಗಳಲ್ಲಿ ಕನ್ನಡ ಬಳಕೆಗೆ ಆದ್ಯತೆ ಸಿಗುವಂತೆ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಗಮನಹರಿಸಬೇಕೆಂದು ಅವರು ಹೇಳಿದರು.

ರಾಜ್ಯದಲ್ಲಿ ಕನ್ನಡ ಭಾμÁ ಕಲಿಕಾ ಅಧಿನಿಯಮವಾಗಿ ಜಾರಿಯಾಗಿ ಐದು ವರ್ಷಗಳು ಕಳೆದಿವೆ. ಎಲ್ಲ ಇಲಾಖೆಗಳ ಎಲ್ಲ ಪತ್ರ ವ್ಯವಹಾರ ಕನ್ನಡದಲ್ಲಿಯೇ ಆಗಬೇಕು. ನಗರದ ಪ್ರಮುಖ ರಸ್ತೆ, ವೃತ್ತಗಳಿಗೆ ಸ್ಥಳೀಯ ನಾಯಕರ, ಹೋರಾಟಗಾರರ ಮತ್ತು ಐತಿಹಾಸಿಕ ಸ್ಥಳಗಳ ಹೆಸರು ನಾಮಕರಣ ಆಗಬೇಕು. ಕನ್ನಡ ಉಳಿಸಿ, ಬೆಳೆಸುವಲ್ಲಿ ಅಧಿಕಾರಿಗಳ ಪಾತ್ರವೂ ಮುಖ್ಯವಾಗಿದೆ ಎಂದು ಟಿ.ಎಸ್.ನಾಗಾಭರಣ ಅವರು ಹೇಳಿದರು.

ಧಾರವಾಡ ಸಾಂಸ್ಕøತಿಕ ರಾಜಧಾನಿ, ರಾಜ್ಯದ ಅನೇಕ ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿದೆ. ಕನ್ನಡ ಅನುμÁ್ಠನದಲ್ಲಿ ಧಾರವಾಡ ಮಾದರಿಯಾಗಬೇಕು. ಧಾರವಾಡ ಮಾದರಿ ಎಂದೇ ಪರಿಚಿತವಾಗಬೇಕು. ಜಾಲತಾಣಗಳು ಸಂಪೂರ್ಣ ಕನ್ನಡಮಯವಾಗಬೇಕು. ಪ್ರಾಧಿಕಾರದ ನಿರಂತರ ಪ್ರಯತ್ನದಿಂದ ಜಾಲತಾಣಗಳ ಮುಖಪುಟ ಕನ್ನಡದಲ್ಲಿ ಬರುತ್ತಿದೆ. ಅದರ ಒಳ ಹೂರಣವೂ ಕನ್ನಡಮಯವಾಗಬೇಕು ಎಂದರು.

ಸರೋಜನಿ ಮಹಿಷಿ ವರದಿ ಸೇರಿದಂತೆ ಕನ್ನಡ ಅನುμÁ್ಠನಕ್ಕಾಗಿ ರಚನೆಗೊಂಡ ಎಲ್ಲ ಆಯೋಗದ ವರದಿಗಳಿಗೆ ಕಾಯ್ದೆ ಸ್ವರೂಪ ನೀಡಿ, ಜಾರಿಗೊಳಿಸಬೇಕು. ಶಾಲಾ ಹಂತದಲ್ಲಿ ಕನ್ನಡ ಬೆಳೆಸಲು ಪಾಲಕರು, ಪೆÇೀಷಕರು ಪೆÇ್ರತ್ಸಾಹ ನೀಡುವ ವಾತಾವರಣ ರೂಪಿಸಬೇಕು ಎಂದರು.

ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದ ಸಮಗ್ರ ಕನ್ನಡ ಅಭಿವೃದ್ಧಿಗಾಗಿ ಈಗಾಗಲೇ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸರಕಾರ ಅಧಿವೇಶನದಲ್ಲಿ ಇದಕ್ಕೆ ಕಾಯ್ದೆ ಸ್ವರೂಪ ನೀಡಬೇಕೆಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, ಧಾರವಾಡವು ಕನ್ನಡದ ಅಗ್ರ ನೆಲ. ಜಿಲ್ಲೆಯ ಆಡಳಿತದಲ್ಲಿ ಕನ್ನಡ ಬಳಕೆ ಆಗುತ್ತಿದೆ. ಜಿಲ್ಲಾ ಮಟ್ಟದ ಇಲಾಖೆಗಳಲ್ಲಿ ಕನ್ನಡ ಅನುಷ್ಠಾನಗೊಳಿಸಿರುವ ಬಗ್ಗೆ ಪರಿಶೀಲನೆ, ಮಾರ್ಗದರ್ಶನ ನಿರಂತರವಾಗಿ ನಡೆಯುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ನೀಡುವ ಎಲ್ಲ ಸಲಹೆ, ಸೂಚನೆಗಳನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.