ನಿದ್ರಾದೇವಿ ನೆಕ್ಸ್ಟ್ ಡೋರ್ ಸಿನಿಮಾಗೆ ಮುಹೂರ್ತ: ಚಿತ್ರತಂಡಕ್ಕೆ ಕ್ರೇಜಿಸ್ಟಾರ್ ಸಾಥ್..

– ಸಂಜಯ್ ನಾಗ್, ಹಾಸನ

ಬೆಂಗಳೂರು: ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಇಂದು ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಶಕ ಸುರಾಗ್ ಸಾಗರ್ ’ನಿದ್ರಾದೇವಿ ನೆಕ್ಸ್ಟ್ ಡೋರ್’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಿಷಿಕಾ ನಾಯಕ್ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಯುರೋಪ್‌ನ ಪ್ರೇಗ್ ಫಿಲ್ಮ್ ಸ್ಕೂಲ್‌ನಲ್ಲಿ ನಿರ್ದೇಶ ಕಲಿತಿರುವ ಸುರಾಗ್ ಸಾಗರ್ ಎಂಟ್ರೋಪಿ ಕಿರುಚಿತ್ರದ ಮೂಲಕ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇದೀಗ ಸುರಾಗ್ ’ನಿದ್ರಾದೇವಿ ನೆಕ್ಟ್ಸ್ ಡೋರ್’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

ಮೂಹೂರ್ತದ ಬಳಿಕ ನಿರ್ಮಾಪಕ ಜಯರಾಮ್ ದೇವಸಮುದ್ರ ಮಾತನಾಡಿ, ಪ್ರವೀಣ್ ಶೆಟ್ಟಿ ಅವರಿಗೋಸ್ಕರ್ ಈ ಪ್ರಾಜೆಕ್ಟ್ ಗೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್ ಕಥೆ ಹೇಳಿದಾಗ ಫಸ್ಟ್ ಇಂಪ್ರೆಷನ್ ನಲ್ಲಿಯೇ ಇಷ್ಟವಾಯ್ತು. ಪ್ರತಿಯೊಬ್ಬರು ಲೈಫ್ ನಲ್ಲಿ ನಡೆಯುವ ಕೆಲ ಘಟನೆಗಳು ಜೀವನದಲ್ಲಿವೆ. ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ ಎಂದರು.

ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು. ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದು ನಾಯಕಿ ಸಿನೆಮಾ ಬಗ್ಗೆ ಮಾತನಾಡಿದರು.

ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಗಳಗವಿರುವ ಸಿನೆಮಾಗೆ ಸೂರಂ ಮೂವೀಸ್ ಬ್ಯಾನರ್ನಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಾಣ ಮಾಡುತ್ತಿದ್ದಾರೆ. ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ. ಈ ತಿಂಗಳಾತ್ಯಂತಕ್ಕೆ ’ನಿದ್ರಾದೇವಿ ನೆಕ್ಟ್ಸ್ ಡೋರ್’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ನಮ್ಮ ಚಿತ್ರದ ಟೈಟಲ್ ವಿಭಿನ್ನವಾಗಿದೆ. ಇದು ಕಾಕತಾಳೀಯ.ಈ ಸಿನೆಮಾ ಮೂಲಕ ಇಬ್ಬರು ನಿದ್ದೆ ಇಲ್ಲದರ ಜರ್ನಿ ಹೇಳಹೊರಟಿದ್ದೇವೆ. ನಾಯಕ, ನಾಯಕಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು. ಅದರೊಳಗೆ ತೆರೆದುಕೊಳ್ಲುವ ಕೊಳ್ಳುವ ಲವ್ ಸ್ಟೋರಿ ಏನು.? ಇದಕ್ಕೆಲ್ಲಾ ಸಿನಿಮಾ ನೋಡಬೇಕು.

-ನಿರ್ದೇಶಕ ಸುರಾಗ್ ಸಾಗರ್,