ನಿಫಾ ವೈರಸ್ ರಾಜ್ಯದಲ್ಲಿ ಕಟ್ಟೆಚ್ಚರ

ಬೆಂಗಳೂರು, ಸೆ.೭- ಕೇರಳ ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹರಡದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ನಿಫಾ ವೈರಸ್ ಪತ್ತೆಯಾಗಿರುವುದರಿಂದ ಕೇರಳದಲ್ಲಿ ಆತಂಕ ಸೃಷ್ಟಿಯಾಗಿದೆ. ಈ ವೈರಸ್ ರಾಜ್ಯಕ್ಕೆ ಹರಡದಂತೆ ಗಡಿಭಾಗದಲ್ಲಿ ಬಿಗಿಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ.
ನಿಫಾ ಸೋಂಕು ಹೇಗೆ ಹರಡುತ್ತದೆ ಎಂಬುದು ಸೇರಿದಂತೆ ಮತ್ತಿತರ ಮಾಹಿತಿಯನ್ನು ಕಲೆ ಹಾಕುವಂತೆ ತಜ್ಞರಿಗೆ ಸೂಚನೆ ನೀಡಿರುವೆ ಎಂದವರು ಹೇಳಿದರು.
ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದ್ದಾರೆ
ಈ ಸಂಬಂಧ ಹೈಕಮಾಂಡ್ ಜೊತೆ ಸದ್ಯಕ್ಕೆ ಚರ್ಚೆಗೆ ಸಮಯ ನಿಗಧಿಯಾಗಿಲ್ಲ. ಈ ಬಾರಿ ದೆಹಲಿಯ ಭೇಟಿ ಸಮಯದಲ್ಲಿ ಸಂಪುಟದ ಖಾಲಿ ಸ್ಥಾನಗಳ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೆಹಲಿಗೆ ತೆರಳುವುದಕ್ಕೆ ಮನ್ನಾ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಸಂಪುಟ ವಿಸ್ತರಣೆ ಕುರಿತು ಭೇಟಿ ಮಾಡುವ ಯಾವುದೇ ಕಾರ್ಯಕ್ರಮವಿಲ್ಲ.ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಪುತ್ರಿಯ ಆರತಕ್ಷತೆ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರೂ ಆಗಮಿಸಲಿದ್ದು ಅವರೊಂದಿಗೆ ಔಪಚಾರಿಕ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಾಳೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಷ್ಟ್ರೀಯ ಹೆದ್ದಾರಿ ಯೋಜನೆ ಕುರಿತು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಯ ಸಂದರ್ಭದಲ್ಲಿ ಬೇರೆಬೇರೆ ಯೋಜನೆಗಳು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನ ಬಿಡುಗಡೆ ಮಾಡುಂತೆ ಚರ್ಚೆ ನಡೆಸಿ ಹಣ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಕೇಂದ್ರ ನಗರಾಭಿವೃದ್ಧಿ ಸಚಿವರೊಂದಿಗೆ ಮೆಟ್ರೋ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಈಗಾಗಲೇ ಬೆಂಗಳೂರಿಗೆ ಬಂದಾಗ ಚರ್ಚೆ ನಡೆಸಿದ್ದು ದೆಹಲಿ ಭೇಟಿ ಸಂದರ್ಭದಲ್ಲಿ ಈ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕೇರಳ ಗಡಿಭಾಗ ಬಂದ್ ಮಾಡಲಾಗಿದ್ದು ಲಸಿಕೆ ಪ್ರಮಾಣ ಹೆಚ್ಚು ಪರೀಕ್ಷೆ ಇನ್ನು ಹೆಚ್ಚು ಮಾಡಲಾಗುತ್ತದೆ ಎಂದರು
ಆಯುಕ್ತರಿಗೆ ಸೂಚನೆ:
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಸೂಚಿಸಲಾಗಿದೆ. ಮಳೆ ಕಡಿಮೆ ಆದ ತಕ್ಷಣ ಸಮರೋಪಾದಿಯಲ್ಲಿ ಕಾಮಗಾರಿ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು

ಜೆಡಿಎಸ್ ನೊಂದಿಗೆ ಮೈತ್ರಿ
ಕಲ್ಬುರ್ಗಿಯ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಕ್ಯಪಡಿಸಿದ್ದಾರೆ.
ಜೆಡಿಎಸ್ ನಾಯಕರು ತಮ್ಮನ್ನು ಭೇಟಿ ಮಾಡಿದ್ದರು. ಆಗ ಜೊತೆಯಾಗಿ ಕೆಲಸ ಮಾಡೋಣ ಎನ್ನುವ ಬಗ್ಗೆ ಚರ್ಚೆಯಾಗಿದೆ ಕಲ್ಬುರ್ಗಿಯಲ್ಲಿ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತೇವೆ ಎಂದು ಹೇಳಿದರು.