ನಿಮ್ಮ ಬದುಕು ಹಸನಾಗಲು ಜೆಡಿಎಸ್‍ಗೆ ಬೆಂಬಲ ನೀಡಿ: ಕುಮಾರಸ್ವಾಮಿ

ಬಸವಕಲ್ಯಾಣ,ಜ.8-“ನಿಮ್ಮ ಬದುಕು ಹಸನಾಗಲು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜನರಲ್ಲಿ ಮನವಿ ಮಾಡಿದರು.
ಬಸವಕಲ್ಯಾಣ ತಾಲ್ಲೂಕಿನಲ್ಲಿ ಇಂದು ನಡೆದ ಜೆಡಿಎಸ್ ಪಂಚರತ್ನಯಾತ್ರೆ ವೇಳೆ ಮಾತನಾಡಿದ ಅವರು, ಬಡವರ, ರೈತರ ಬದುಕು ಹಸನಾಗಲು ಯಾವುದೇ ಪಕ್ಷಗಳು ಪ್ರಾಮಾಣಿಕವಾದ ಪ್ರಯತ್ನ ಮಾಡಿಲ್ಲ, ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷದ ಹಂಗಿಲ್ಲದೆ ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ನೀಡಿದರೆ ಬಡವರ ಮತ್ತು ರೈತರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಈ ನಿಟ್ಟನಲ್ಲಿ ಜನರೇ ತೀರ್ಮಾನ ಮಾಡಬೇಕು ಎಂದು ಅವರು ಕೋರಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಯುಕೆಜಿಯಿಂದ 12ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುವುದು, ಬಡವರಿಗೆ ಉಚಿತವಾದ ಆರೋಗ್ಯ ಸೇವೆ ಒದಗಿಸಲಾಗುವುದು ಮತ್ತು ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪಕ್ಷದ ಸಿ.ಎಂ.ಇಬ್ರಾಹಿಂ, ಮುಖಂಡರಾ ಬಂಡೆಪ್ಪ ಕಾಶೆಂಪೂರ, ಬಸವಕಲ್ಯಾಣ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರುಬ್ ಅಲಿ ಖಾದ್ರಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.