ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ನಾವು ಇಲ್ಲಿಗೆ ಬಂದಿದ್ದೆವೆ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ ಜು 17: ಅಷ್ಟೂರ ಗ್ರಾಮದ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸ್ಪಂದಿಸಲು ನಾವು ಇಲ್ಲಿಗೆ ಬಂದಿದ್ದೆವೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಅವರು ಶನಿವಾರ ಅಷ್ಟೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಪ್ರತಿ ತಿಂಗಳು ಮೂರನೆ ಶನಿವಾರ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಹೋಗಿ ಅಲ್ಲಿಯ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ನೀಡಲು ಈ ಕಾರ್ಯಕ್ರಮ ಹಾಕಿಕೊಳ್ಳಲಾಗಿರುವದರಿಂದ ಇಂದು ನಮ್ಮ ಅಧಿಕಾರಿಗಳ ತಂಡದೊಂದಿಗೆ ತಮ್ಮ ಈ ಗ್ರಾಮದ ಸಮಸ್ಯೆಗಳನ್ನು ಆಲಿಸಲು ನಾವು ಇಲ್ಲಿಗೆ ಬಂದಿದ್ದೆವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕೋವಿಡ್ ಮುಂಚೆ ಆರಂಭವಾದ ಈ ಕಾರ್ಯಕ್ರಮ ಕೋವಿಡ್ ಸಂದರ್ಭದಲ್ಲಿ ನಿಲ್ಲಿಸಲಾಗಿತ್ತು ಮತ್ತೆ ಈಗ ಆರಂಭಿಸಲಾಗಿದೆ. ಕಳೆದ ತಿಂಗಳು ಈ ಕಾರ್ಯಕ್ರಮ ಗಡಿ ಗ್ರಾಮ ಚೊಂಡಿ ಮುಖೇಡ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಷ್ಟೂರ ಗ್ರಾಮ ಬೀದರ ನಗರಕ್ಕೆ ಸಮೀಪದಲ್ಲಿ ಇರುವುದರಿಂದ ತಮ್ಮ ಇತರೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ನಮ್ಮ ಕಛೇರಿಗೆ ಬಂದು ತಾವು ತಿಳಿಸಬಹುದಾಗಿದೆ ಎಂದು ಹೇಳಿದರು.

ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶಂಪೂರ ಅವರು ಮಾತನಾಡಿ ಹಳ್ಳಿ ಮಟ್ಟದಲ್ಲಿ ಅಧಿಕಾರಿಗಳು ಬಂದಾಗ ಅವರಿಗೆ ಜನರ ನಿಜವಾದ ಸಮಸ್ಯೆಗಳನ್ನು ಅರಿಯಲು ಸಹಾಯಕವಾಗುತ್ತದೆ ಇಂದು ಈ ಗ್ರಾಮದ ಸುದೈವ ಇದೆ ಅಧಿಕಾರಿಗಳು ಕಚೇರಿ ಹೋದರೆ ಸಿಗುವದಿಲ್ಲ ಇಂದು ಇಷ್ಟು ಜನ ಅಧಿಕಾರಿಗಳು ಒಂದೇ ದಿನ ತಮ್ಮ ಗ್ರಾಮದ ಸಮಸ್ಯೆಗಳನ್ನು ಆಲಿಸಲು ಬಂದಿದ್ದಾರೆ ಎಂದರು.

ಅಷ್ಟೂರ ಗ್ರಾಮ ನಮ್ಮ ಜಿಲ್ಲೆಯಲ್ಲಿ ಕುಸ್ತಿಪಟುಗಳಿಗೆ ಹೆಸರಾದ ಗ್ರಾಮ ಹಳ್ಳಿಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡಬೇಕಾಗಿದೆ ಈ ಗ್ರಾಮ ನಗರಕ್ಕೆ ಸಮೀಪದಲ್ಲಿ ಇರುವುದರಿಂದ ಇದರ ಅಭಿವೃದ್ಧಿಗೆ ಅನುಕುಲವಾಗಿದೆ ಮತ್ತು ನಾವು ಇನ್ನು ಹೆಚ್ಚಿನ ಅಭಿವೃದ್ದಿಮಾಡಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಎಂ. ಅವರು ಮಾತನಾಡಿ ಜನರ ಮೂಲಭೂತ ಸಮಸ್ಯೆಗಳ ಅರಿವು ಇಂಥ ಕಾರ್ಯಕ್ರಮಗಳಿಂದ ಆಗುತ್ತದೆ ಮತ್ತು ತಮ್ಮ ಯಾವುದೇ ಸಮಸ್ಯೆಗಳಿದ್ದರು ಅವುಗಳಿಗೆ ಸ್ಪಂದಿಸಲು ಜಿಲ್ಲಾಡಳಿತ ಸದಾ ನಿಮ್ಮೊಂದಿಗೆ ಇರುತ್ತದೆ ತಮ್ಮ ಗ್ರಾಮದ ಯಾವುದೇ ಸಮಸ್ಯೆಗಳಿದ್ದರು ನೇರವಾಗಿ ನಮ್ಮ ಕಛೇರಿಗೆ ಬಂದು ತಿಳಿಸಬಹುದು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಅಷ್ಟೂರ ಗ್ರಾಮದ ಸಾರ್ವಜನಿಕರ ಆಹ್ವಾಲುಗಳನ್ನು ಜಿಲ್ಲಾಧಿಕಾರಿಗಳು ಶಾಸಕರು ಆಲಿಸಿ ಅವುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಸರ್ಕಾರದ. ವಿವಿಧ ಯೋಜನೆಯ ಹಕ್ಕುಪತ್ರಗಳನ್ನು ಅಷ್ಟೂರ ಗ್ರಾಮದ ಫಲಾನುಭವಿಗಳಿಗೆ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ನಯೀಮ್ ಮೋಮಿನ್. ಬೀದರ ತಹಶಿಲ್ದಾರ ಅಣ್ಣಾರಾವ್ ಪಾಟೀಲ್. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ. ಅಷ್ಟೂರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅರ್ಚನಾ. ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.