ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು: ಮೂವರ ಸಜೀವ ದಹನ

ಮಳವಳ್ಳಿ : ಜೂ.04: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಮೂವರು ಸಜೀವ ದಹನವಾಗಿರುವ ದುರಂತ ತಾಲ್ಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ.
ದುರಂತದಲ್ಲಿ ಶೇಖ್ ಫೈಸಲ್ (44), ಮೆಹಕ್ (33) ಮತ್ತು ಶೇಖ್ ಆಯಿಲ್ (11) ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಒಂದೇ ಕುಟುಂಬದವರು ಎನ್ನಲಾಗಿದೆ.
ಮುಂಜಾನೆ 5 ಗಂಟೆ ಸಮಯದಲ್ಲಿ ಈ ದಾರುಣ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪದ ಹಳ್ಳದಲ್ಲಿ ಕಾರು ಪಲ್ಟಿ ಹೊಡೆದಿದೆ. ಕಾರು ಹಳ್ಳಕ್ಕೆ ಉರುಳುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸಿದ್ದಾರೆ.
ಈ ಸಂಬಂಧ ಹಲಗೂರು ಪೆÇಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.