ನಿಯಮ ಉಲ್ಲಂಘನೆ: ವಾಹನಗಳು ಸೀಜ್

ಬ್ಯಾಡಗಿ, ಮೇ 2: ಪಟ್ಟಣದಲ್ಲಿ ಜನರು ಹಾಗೂ ವಾಹನ ಸವಾರರು ಕೊರೋನಾಗೂ ಕ್ಯಾರೆ ಎನ್ನದೇ ಲಾಕ್?ಡೌನ್ ಆದೇಶವನ್ನು ಉಲ್ಲಂಘಿಸಿ ರಸ್ತೆಗೆ ಇಳಿಯುತ್ತಿರುವುದು ಸಾಮಾನ್ಯವಾಗಿದ್ದು, ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪೆÇಲೀಸ್ ಇಲಾಖೆಯು ಶನಿವಾರ ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿಯುವ ವಾಹನಗಳನ್ನು ಸೀಜ್ ಮಾಡುವ ಮೂಲಕ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ಬಸವರಾಜ ಅವರು, ಸಾರ್ವಜನಿಕರು ತಮ್ಮ ಆರೋಗ್ಯದ ಹಿತ ದೃಷ್ಟಿಯಿಂದ ಕಡ್ಡಾಯವಾಗಿ ಸರ್ಕಾರದ ಲಾಕ್ ಡೌನ್ ಆದೇಶವನ್ನು ಪಾಲಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡುವುದನ್ನು ನಿರ್ಬಂಧಿಸಿದ್ದರೂ ಕೂಡ ವಾಹನಗಳ ಮೂಲಕ ಸಂಚಾರ ಮಾಡುತ್ತಿರುವುದು ಕಾನೂನಿನ ನಿಯಮವನ್ನು ಮೀರಿದಂತಾಗಿದ್ದು, ಈ ಹಿನ್ನಲೆಯಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ಸುಮಾರು 50ಕ್ಕೂ ಹೆಚ್ಚು ಬೈಕುಗಳನ್ನು ಸೀಜ್ ಮಾಡಲಾಗಿದೆ ಎಂದರು.
ಈ ಕಾರ್ಯಾಚರಣೆಯಲ್ಲಿ ಪಿಎಸೈ ಎಂ.ಎಂ. ಮಹಾಂತೇಶ್ ಹಾಗೂ ಪೆÇಲೀಸ್ ಸಿಬ್ಬಂದಿಯವರು ಪಾಲ್ಗೊಂಡಿದ್ದರು.