ನಿಯಮ ಉಲ್ಲಂಘಿಸಿದವರಿಗೆ ದಂಡ

ಗದಗ ಏ 22: ಕೋವಿಡ್ 19 ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ ನಿಯಮಗಳ ಪಾಲನೆ ಎಲ್ಲರೂ ಮಾಡಬೇಕು. ನಿಯಮ ಉಲ್ಲಂಘಿಸಿದಲ್ಲಿ ದಂಡ ವಿಧಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.

ನಗರದ ಬ್ಯಾಂಕ್ ರಸ್ತೆ, ಹುಯಿಲಗೋಳ ನಾರಾಯಣ ವೃತ್ತ, ಗ್ರೇನ್ ಮಾರ್ಕೆಟ್, ಬಸವೇಶ್ವರ ವೃತ್ತ ಸೇರಿದಂತೆ ವಿವಿಧಡೆ ತೆರಳಿ ಕೊವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರಿಗೆ ಸ್ಥಳದಲ್ಲೆ ದಂಡ ವಿಧಿಸಿದರು.

ಸೋಂಕು ನಿಯಂತ್ರಣ ಕಾರ್ಯಾಚರಣೆಯಲ್ಲಿ ಗದಗ ಬೆಟಗೇರಿ ನಗರಸಭೆ ಪೌರಾಯುಕ್ ರಮೇಶ್ ಜಾಧವ್, ಶಹರ ಠಾಣೆ ಸಿ.ಪಿ.ಐ ಸೇರಿದಂತೆ ಇತರ ಅಧಿಕಾರಿಗಳು ಇದ್ದರು. ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಸರಿಯಾದ ಪಾಲನೆ ಮಾಡುವ ಮೂಲಕ ಸೊಂಕು ನಿಯಂತ್ರಣಕ್ಕೆ ನಗರದ ವ್ಯಾಪಾರಸ್ಥರು, ಸಾರ್ವಜನಿಕರು, ಸಂಘ ಸಂಸ್ಥೆಗಳು ಸಹಕಾರ ನೀಡಬೇಕು. ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮುಖಗವಸು ಧರಿಸಬೇಕು ಎಂದು ಜಾಗೃತಿ ಮೂಡಿಸಿದರು.