ನಿಯಮ ಪಾಲಿಸಲು ಕರೆ

ಬಾದಾಮಿ, ಜೂ 5: ಪ್ರತಿಯೊಬ್ಬರು ಕೊರೊನ ಲಸಿಕೆ ಪಡೆದು ಆರೋಗ್ಯ ವಾಗಿರಬೇಕು. ಸರಕಾರದ ನಿಯಮಗಳನ್ನು ಪಾಲಿಸುವ ಮೂಲಕ ಕೊರೊನ ಮುಕ್ತ ಮಾಡಲು ಸಹಕರಿಸಬೇಕು ಎಂದು ನೋಡಲ್ ಅಧಿಕಾರಿ, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಎಚ್.ಕರಡಿಗುಡ್ಡ ಹೇಳಿದರು.
ಅವರು ತಾಲೂಕಿನ ಕಾತರಕಿ ಗ್ರಾಮದಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ 20 ಜನರಿಗೆ ಕೋವಿಡ್ ಲಸಿಕೆ ಹಾಕಲಾಯಿತು ಮತ್ತು ಕೋವಿಡ್ ಗಂಟಲು ದ್ರವ ಪರೀಕ್ಷೆ ಮಾಡಲಾಯಿತು. ಈ ಸಂದರ್ಭಗಳಲ್ಲಿ ವೈದ್ಯ ಡಾ.ಪ್ರಭುಲಿಂಗ ಗಾಣಿಗೇರ, ಪಿಡಿಒ ಶೃತಿ, ಗ್ರಾಮ ಪಂಚಾಯತ ಅಧ್ಯಕ್ಷ ವಿ.ವಿ. ಭಿಕ್ಷಾವತಿಮಠ, ಕಂದಾಯ ನಿರೀಕ್ಷಕರು, ಗ್ರಾ.ಪಂ.ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು ಭಾಗವಹಿಸಿದ್ದರು.