ನಿರಂತರ ಪ್ರಾಮಾಣಿಕ ಪ್ರಯತ್ನ ಯಶಸ್ಸಿನ ಕಟ್ಟಿಟ್ಟ ಬುತ್ತಿ

ವಿಜಯಪುರ ಆ.30-‘ನಿರಂತರ ಪ್ರಾಮಾಣಿಕ ಪ್ರಯತ್ನ, ಶ್ರದ್ಧೆ, ಭಕ್ತಿಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಜಶೇಖರ ಬೆನಕನಹಳ್ಳಿ ಹೇಳಿದರು.
ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಹಾಕಿ ಮಾಂತ್ರಿಕ ಧ್ಯಾನ್‍ಚಂದ್ ಅವರ ಜನ್ಮ ದಿನ ನಿಮಿತ್ಯ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾಮನೋಭಾವ ಮುಖ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ ಅವರು ಮಾತನಾಡಿ, ದೈಹಿಕ ಕ್ಷಮತೆ, ಮಾನಸಿಕ ಸ್ಥೈರ್ಯ ಒಂದಿದ್ದರೆ ಜೀವನ ಕಟ್ಟಿಕೊಳ್ಳಲಿಕ್ಕೆ ಕ್ರೀಡೆ ಸ್ಫೂರ್ತಿಯಾಗಲಿದೆ ಎಂದÀರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ. ಶ್ರೀನಿವಾಸ, ಡಾ. ರಮೇಶ್ ಸೋನ ಕಾಂಬಳೆ, ಡಾ.ವಿಷ್ಣು ಶಿಂಧೆ, ಡಾ.ಎಂ.ಪಿ.ಬಳಿಗಾರ ಮತ್ತು ಡಾ.ವಿಶ್ವನಾಥ ನಡಕಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಅಧ್ಯಯನ ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಜಕುಮಾರ ಮಾಲಿಪಾಟೀಲ ಸ್ವಾಗತಿಸಿದರು. ಡಾ. ಜ್ಯೋತಿ ಉಪಾಧ್ಯೆ ಅತಿಥಿಗಳನ್ನು ಪರಿಚಯಿಸಿದರು. ಡಾ.ಹನುಮಂತಯ್ಯ ಪೂಜಾರಿ ವಂದಿಸಿದರು. ಡಾ.ಆಶ್ವಿನಿ ಕೆ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.