ನಿರಾಶ್ರಿತರಿಂದ ಮತದಾನ

ವಿಜಯಪುರ, ಮೇ.11: ವಿಧಾನಸಭೆ ಚುನಾವಣೆ ಅಂಗವಾಗಿ ಮೇ.10ರ ಇಂದು ವಿಜಯಪುರದ ಅಫಜಲಪೂರ ಟಕ್ಕೆಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 30ರಲ್ಲಿ ನಿರಾಶ್ರಿತ ಪರಿಹಾರ ಕೇಂದ್ರದ 32 ಜನ ನಿರಾಶ್ರಿತರು ಮತದಾನ ಮಾಡಿದ್ದಾರೆ.
ಕಳೆದ 2022ರಲ್ಲಿ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಹಲವು ವರ್ಷಗಳಿಂದ ವಾಸವಿದ್ದ ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಡಾ.ವಿಜಂiÀಮಹಾಂತೇಶ ದಾನಮ್ಮನವರು ಅವರು ಈ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ಮತದಾನ ಕುರಿತು ಜಾಗೃತಿ ಮೂಡಿಸಿ, ವೋಟರ್ ಐಡಿ ಇಲ್ಲದ ನಿರಾಶ್ರಿತರಿಗೆ ಕೇಂದ್ರದಿಂದ ದಾಖಲೆಗಳನ್ನು ಪಡೆದು, ಪರಿಶೀಲಿಸಿ ಅರ್ಹ ನಿರಾಶ್ರಿತರಿಗೆ ಮತದಾರರ ಯಾದಿಯಲ್ಲಿ ಹೆಸರು ಸೇರಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾದ ಹಿನ್ನಲೆಯಲ್ಲಿ ಇಂದು ನಡೆದ ಮತದಾನದಲ್ಲಿ ಕೇಂದ್ರದ 32 ಜನ ನಿರಾಶ್ರಿತರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿರುವುದು ವಿಶೇಷವಾಗಿದೆ.