ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಭೇಟಿ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜ.೨೪: ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಹೋ.ಚಿ.ಬೋರಯ್ಯ ಬಡಾವಣೆಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿರಾಶ್ರಿತರ ಪರಿಹಾರ ಕೇಂದ್ರದ ಡಾರ್ಮೆಂಟರಿ, ಅಡುಗೆ ಮನೆ ಸ್ವಚ್ಛತೆಯನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದು, ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ 332 ಪುರುಷರು, 71 ಮಹಿಳೆಯರು ಸೇರಿದಂತೆ ಒಟ್ಟು 403 ಜನ ನಿರಾಶ್ರಿತರು ಇದ್ದು, ನಿರಾಶ್ರಿತರ ಕುಂದು ಕೊರತೆ ವಿಚಾರಣೆ ಮಾಡಿದ ಅವರು, ನಿರಾಶ್ರಿತರ ವಿಳಾಸವನ್ನು ಪತ್ತೆ ಮಾಡಿ, ಆದಷ್ಟು ಬೇಗ ಇವರನ್ನು ಮರಳಿ ಮನೆಗೆ ಕಳುಹಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಮಹಾದೇವಯ್ಯ ಸೇರಿದಂತೆ ನಿರಾಶ್ರಿತ ಪರಿಹಾರ ಕೇಂದ್ರದ ಸಿಬ್ಬಂದಿ ಇದ್ದರು.