ನಿರಾಶ್ರಿತ ಪರಿಹಾರ ಕೇಂದ್ರದಲ್ಲಿ ಮನೋಚೈತನ್ಯ ಶಿಬಿರ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮೇ.೨೬: ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಹೋ.ಚಿ.ಬೋರಯ್ಯ ಬಡಾವಣೆಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶುಕ್ರವಾರ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ವಿಶ್ವ ಸ್ಕಿಜೋಫ್ರೇನಿಯ ದಿನಾಚರಣೆಯ ಪ್ರಯುಕ್ತ ಮನೋಚೈತನ್ಯ ಕಾರ್ಯಕ್ರಮ ಆಚರಿಸಲಾಯಿತು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿ, ಪ್ರತಿವರ್ಷ ಮೇ 24ರಂದು ವಿಶ್ವದಾದ್ಯಂತ ಸ್ಕಿಜೋಫ್ರೇನಿಯಾ ಕಾಯಿಲೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವದಾದ್ಯಂತ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯನ್ನು ಆಚರಿಸಲಾಗುತ್ತದೆ, ಸ್ಕಿಜೋಫ್ರೇನಿಯಾ ಎನ್ನುವುದು ತೀವ್ರತರವಾದ ಮಾನಸಿಕ ಕಾಯಿಲೆಯಾಗಿದ್ದು ಈ ರೀತಿಯ ಕಾಯಿಲೆ ಇರುವವರನ್ನು ಮನೆಯಲ್ಲಿ ಅಥವಾ ಸಮುದಾಯದಲ್ಲಿ ಕಳಂಕ ಮತ್ತು ತಾರತಮ್ಯದಿಂದ ಬಂಧಿಸುವುದು ಹಗ್ಗದಿಂದ ಕಟ್ಟಿ ಹಾಕುವುದು ಮತ್ತು ಶಿಕ್ಷೆ ಕೊಡುವುದನ್ನು ಮಾಡುವುದು ಸರಿಯಲ್ಲ, ಇವರು ಕೂಡ ನಮ್ಮ ನಿಮ್ಮ ಹಾಗೆ ಮನುಷ್ಯರಾಗಿದ್ದು, ಸ್ಕಿಜೋಫ್ರೇನಿಯಾ ಕಾಯಿಲೆಯಿಂದ ಬಳಲುವವರಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಜಿಲ್ಲಾ ಆಸ್ಪತ್ರೆಯ ಮನೋವೈದ್ಯರಿಂದ ಚಿಕಿತ್ಸೆ ದೊರೆಯುತ್ತದೆ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣವಾಗಿ ಗುಣಮುಖರಾಗಬೇಕು ಎಂದರು.