ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ಮಾಶಾಸನ ವಿತರಣೆ

ಕರಜಗಿ :ಮಾ.13:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಗತಿಕರಿಗೆ ಪ್ರತಿ ತಿಂಗಳು ಒಂದುಸಾವಿರ ಮಾಸಾಶನ ವಾತ್ಸಲ್ಯ ಕಿಟ್ ನೀಡಲಾಗುತ್ತಿದೆ’ ಎಂದು ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವರಾಜ ಆಚಾರ್ಯ ಹೇಳಿದರು.
ಅವರು ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಿಸಿ ಮಾತನಾಡಿ ಕರಜಗಿ ವಲಯದಲ್ಲಿ 22 ನಿರ್ಗತಿಕರನ್ನು ಗುರುತಿಸಿ ಅವರ ಜೀವನ ನಿರ್ವಹಣೆಗಾಗಿ ಪಾತ್ರೆ, ಚಾಪೆ, ತಲೆದಿಂಬು,ಹೊದಿಕೆ ಒಳಗೊಂಡಿರುವ ವಾತ್ಸಲ್ಯ ಕಿಟ್ ವಿತರಿಸಲಾಗುತ್ತಿದೆ.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ
ಆಶೀರ್ವಾದದೊಂದಿಗೆ ಸಂಸ್ಥೆಯು ಸಮಾಜದಲ್ಲಿ ಸರ್ವರ ಒಳಿತಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಉತ್ತಮವಾಗಿ ಸೇವೆ ಮಾಡುತ್ತಿದೆ’ ಎಂದು ಹೇಳಿದರು
ಈ,ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪಾರ್ವತಿ ಮಠಪತಿ ವಲಯ ಮೇಲ್ವಿಚಾರಕ ಅನೀಲ ದಾವಣೆ ಇತರರಿದ್ದರು